1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: And the LORD said to Moses,
2 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ, BSB BSB: “Speak to the Israelites and tell them that if a man or woman makes a special vow, the vow of a Nazirite, to separate himself to the LORD,
3 ULB ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು. BSB BSB: he is to abstain from wine and strong drink. He must not drink vinegar made from wine or strong drink, and he must not drink any grape juice or eat fresh grapes or raisins.
4 ULB ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. BSB BSB: All the days of his separation, he is not to eat anything that comes from the grapevine, not even the seeds or skins.
5 ULB <<ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು. BSB BSB: For the entire period of his vow of separation, no razor shall touch his head. He must be holy until the time of his separation to the LORD is complete; he must let the hair of his head grow long.
6 ULB ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು. BSB BSB: Throughout the days of his separation to the LORD, he must not go near a dead body.
7 ULB ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ. BSB BSB: Even if his father or mother or brother or sister should die, he is not to defile himself, because the symbol of consecration to his God is upon his head.
8 ULB ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು. BSB BSB: Throughout the time of his separation, he is holy to the LORD.
9 ULB ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು. BSB BSB: If someone suddenly dies in his presence and defiles his consecrated head of hair, he must shave his head on the day of his cleansing—the seventh day.
10 ULB ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. BSB BSB: On the eighth day he must bring two turtledoves or two young pigeons to the priest at the entrance to the Tent of Meeting.
11 ULB ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. BSB BSB: And the priest is to offer one as a sin offering and the other as a burnt offering to make atonement for him, because he has sinned by being in the presence of the dead body. On that day he must consecrate his head again.
12 ULB ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು. BSB BSB: He must rededicate his time of separation to the LORD and bring a year-old male lamb as a guilt offering. But the preceding days shall not be counted, because his separation was defiled.
13 ULB ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು. BSB BSB: Now this is the law of the Nazirite when his time of separation is complete: He must be brought to the entrance to the Tent of Meeting,
14 ULB ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು. BSB BSB: and he is to present an offering to the LORD of an unblemished year-old male lamb as a burnt offering, an unblemished year-old female lamb as a sin offering, and an unblemished ram as a peace offering—
15 ULB ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು. BSB BSB: together with their grain offerings and drink offerings—and a basket of unleavened cakes made from fine flour mixed with oil and unleavened wafers coated with oil.
16 ULB ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು. BSB BSB: The priest is to present all these before the LORD and make the sin offering and the burnt offering.
17 ULB ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು. BSB BSB: He shall also offer the ram as a peace offering to the LORD, along with the basket of unleavened bread. And the priest is to offer the accompanying grain offering and drink offering.
18 ULB ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. BSB BSB: Then at the entrance to the Tent of Meeting, the Nazirite is to shave his consecrated head, take the hair, and put it on the fire under the peace offering.
19 ULB ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು. BSB BSB: And the priest is to take the boiled shoulder from the ram, one unleavened cake from the basket, and one unleavened wafer, and put them into the hands of the Nazirite who has just shaved the hair of his consecration.
20 ULB ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು. BSB BSB: The priest shall then wave them as a wave offering before the LORD. This is a holy portion for the priest, in addition to the breast of the wave offering and the thigh that was presented. After that, the Nazirite may drink wine.
21 ULB ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.>> BSB BSB: This is the law of the Nazirite who vows his offering to the LORD for his separation, in addition to whatever else he can afford; he must fulfill whatever vow he makes, according to the law of his separation.”
22 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
23 ULB <<ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, <ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು, BSB BSB: “Tell Aaron and his sons: This is how you are to bless the Israelites. Say to them:
25 ULB ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; BSB BSB: may the LORD cause His face to shine upon you and be gracious to you;
26 ULB ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ> ಎಂಬುದೇ. BSB BSB: may the LORD lift up His countenance toward you and give you peace.’
27 ULB ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.>> BSB BSB: So they shall put My name on the Israelites, and I will bless them.”
Select verses for actions: Enter goes to them and Escape comes back.