1 ULB ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, BSB BSB: Therefore if you have any encouragement in Christ, if any comfort from His love, if any fellowship with the Spirit, if any affection and compassion,
2 ULB ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.. BSB BSB: then make my joy complete by being like-minded, having the same love, being united in spirit and purpose.
3 ULB ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. BSB BSB: Do nothing out of selfish ambition or empty pride, but in humility consider others more important than yourselves.
4 ULB ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. BSB BSB: Each of you should look not only to your own interests, but also to the interests of others.
6 ULB ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, BSB BSB: Who, existing in the form of God, did not consider equality with God something to be grasped,
7 ULB ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. BSB BSB: but emptied Himself, taking the form of a servant, being made in human likeness.
8 ULB ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. BSB BSB: And being found in appearance as a man, He humbled Himself and became obedient to death—even death on a cross.
11 ULB ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು. BSB BSB: and every tongue confess that Jesus Christ is Lord, to the glory of God the Father.
12 ULB ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. BSB BSB: Therefore, my beloved, just as you have always obeyed, not only in my presence, but now even more in my absence, continue to work out your salvation with fear and trembling.
13 ULB ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. BSB BSB: For it is God who works in you to will and to act on behalf of His good purpose.
14 ULB ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. BSB BSB: Do everything without complaining or arguing,
15 ULB ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. BSB BSB: so that you may be blameless and pure, children of God without fault in a crooked and perverse generation, in which you shine as lights in the world
16 ULB ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. BSB BSB: as you hold forth the word of life, in order that I may boast on the day of Christ that I did not run or labor in vain.
17 ULB ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. BSB BSB: But even if I am being poured out like a drink offering on the sacrifice and service of your faith, I am glad and rejoice with all of you.
18 ULB ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ. BSB BSB: So you too should be glad and rejoice with me.
19 ULB ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. BSB BSB: Now I hope in the Lord Jesus to send Timothy to you soon, that I also may be cheered when I learn how you are doing.
20 ULB ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. BSB BSB: I have nobody else like him who will genuinely care for your needs.
21 ULB ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. BSB BSB: For all the others look after their own interests, not those of Jesus Christ.
22 ULB ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. BSB BSB: But you know Timothy’s proven worth, that as a child with his father he has served with me to advance the gospel.
23 ULB ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. BSB BSB: So I hope to send him as soon as I see what happens with me.
24 ULB ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. BSB BSB: And I trust in the Lord that I myself will come soon.
25 ULB ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. BSB BSB: But I thought it necessary to send back to you Epaphroditus, my brother, fellow worker, and fellow soldier, who is also your messenger and minister to my needs.
26 ULB ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. BSB BSB: For he has been longing for all of you and is distressed because you heard he was ill.
27 ULB ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. BSB BSB: He was sick indeed, nearly unto death. But God had mercy on him, and not only on him but also on me, to spare me sorrow upon sorrow.
28 ULB ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. BSB BSB: Therefore I am all the more eager to send him, so that when you see him again you may rejoice, and I may be less anxious.
29 ULB ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ. BSB BSB: Welcome him in the Lord with great joy, and honor men like him,
Select verses for actions: Enter goes to them and Escape comes back.