1 ULB ಹೀಗಿರಲಾಗಿ, ನನ್ನ ಪ್ರಿಯರೇ ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ. BSB BSB: Therefore, my brothers, whom I love and long for, my joy and crown, that is how you must stand firm in the Lord, my beloved.
2 ULB ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. BSB BSB: I urge Euodia and Syntyche to agree with each other in the Lord.
3 ULB ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ. BSB BSB: Yes, and I ask you, my true yokefellow, to help these women who have contended at my side for the gospel, along with Clement and the rest of my fellow workers, whose names are in the Book of Life.
4 ULB ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. BSB BSB: Rejoice in the Lord always. I will say it again: Rejoice!
5 ULB ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ. BSB BSB: Let your gentleness be apparent to all. The Lord is near.
6 ULB ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. BSB BSB: Be anxious for nothing, but in everything, by prayer and petition, with thanksgiving, present your requests to God.
7 ULB ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದಿವ್ಯಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. BSB BSB: And the peace of God, which surpasses all understanding, will guard your hearts and your minds in Christ Jesus.
8 ULB ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. BSB BSB: Finally, brothers, whatever is true, whatever is honorable, whatever is right, whatever is pure, whatever is lovely, whatever is admirable—if anything is excellent or praiseworthy—think on these things. 9 ULB ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. BSB BSB: Whatever you have learned or received or heard from me, or seen in me, put it into practice. And the God of peace will be with you.
10 ULB ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ. BSB BSB: Now I rejoice greatly in the Lord that at last you have revived your concern for me. You were indeed concerned, but you had no opportunity to show it.
11 ULB ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. BSB BSB: I am not saying this out of need, for I have learned to be content regardless of my circumstances.
12 ULB ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. BSB BSB: I know how to live humbly, and I know how to abound. In any and every situation I have learned the secret of being filled and being hungry, of having plenty and having need.
13 ULB ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. BSB BSB: I can do all things through Christ who gives me strength.
14 ULB ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. BSB BSB: Nevertheless, you have done well to share in my affliction.
15 ULB ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. BSB BSB: And as you Philippians know, in the early days of the gospel, when I left Macedonia, no church but you partnered with me in the matter of giving and receiving.
16 ULB ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. BSB BSB: For even while I was in Thessalonica, you provided for my needs again and again.
17 ULB ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಖಾತೆಯನ್ನು ವರ್ಧಿಸುವಂಥ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸುತ್ತೇನೆ. BSB BSB: Not that I am seeking a gift, but I am looking for the fruit that may be credited to your account.
18 ULB ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. BSB BSB: I have all I need and more, now that I have received your gifts from Epaphroditus. They are a fragrant offering, an acceptable sacrifice, well-pleasing to God.
19 ULB ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. BSB BSB: And my God will supply all your needs according to His glorious riches in Christ Jesus.
20 ULB ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. BSB BSB: To our God and Father be glory forever and ever. Amen.
21 ULB ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. BSB BSB: Greet all the saints in Christ Jesus. The brothers who are with me send you greetings.
22 ULB ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. BSB BSB: All the saints send you greetings, especially those from the household of Caesar.
23 ULB ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. BSB BSB: The grace of the Lord Jesus Christ be with your spirit.
Select verses for actions: Enter goes to them and Escape comes back.