1 ULB ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. BSB BSB: These are the proverbs of Solomon son of David, king of Israel,
2 ULB ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. BSB BSB: for gaining wisdom and discipline, for comprehending words of insight,
3 ULB ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. BSB BSB: and for receiving instruction in wise living and in righteousness, justice, and equity.
4 ULB ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. BSB BSB: To impart prudence to the simple and knowledge and discretion to the young,
5 ULB ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು. BSB BSB: let the wise listen and gain instruction, and the discerning acquire wise counsel
6 ULB ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ. BSB BSB: by understanding the proverbs and parables, the sayings and riddles of the wise.
7 ULB ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು. BSB BSB: The fear of the LORD is the beginning of knowledge, but fools despise wisdom and discipline.
8 ULB ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. BSB BSB: Listen, my son, to your father’s instruction, and do not forsake the teaching of your mother.
9 ULB ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು. BSB BSB: For they are a garland of grace on your head and a pendant around your neck.
10 ULB ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ. BSB BSB: My son, if sinners entice you, do not yield to them.
11 ULB ಅವರು, <<ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ. BSB BSB: If they say, “Come along, let us lie in wait for blood, let us ambush the innocent without cause,
12 ULB ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. BSB BSB: let us swallow them alive like Sheol, and whole like those descending into the Pit.
13 ULB ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ. BSB BSB: We will find all manner of precious goods; we will fill our houses with plunder.
14 ULB ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ>> ಎಂದು ಹೇಳಿದರೆ, BSB BSB: Throw in your lot with us; let us all share one purse”—
15 ULB ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ. BSB BSB: my son, do not walk the road with them or set foot upon their path.
16 ULB ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು. BSB BSB: For their feet run to evil, and they are swift to shed blood.
17 ULB ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ. BSB BSB: How futile it is to spread the net where any bird can see it!
18 ULB ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. BSB BSB: But they lie in wait for their own blood; they ambush their own lives.
19 ULB ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು. BSB BSB: Such is the fate of all who are greedy, whose unjust gain takes the lives of its possessors.
20 ULB ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ. BSB BSB: Wisdom calls out in the street, she lifts her voice in the square;
21 ULB ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ, BSB BSB: in the main concourse she cries aloud, at the city gates she makes her speech:
22 ULB <<ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? BSB BSB: “How long, O simple ones, will you love your simple ways? How long will scoffers delight in their scorn and fools hate knowledge?
23 ULB ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು. BSB BSB: If you had repented at my rebuke, then surely I would have poured out my spirit on you; I would have made my words known to you.
24 ULB ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ; BSB BSB: Because you refused my call, and no one took my outstretched hand,
25 ULB ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ. BSB BSB: because you neglected all my counsel, and wanted none of my correction,
26 ULB ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ BSB BSB: in turn I will mock your calamity; I will sneer when terror strikes you,
27 ULB ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು. BSB BSB: when your dread comes like a storm, and your destruction like a whirlwind, when distress and anguish overwhelm you.
28 ULB ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು. BSB BSB: Then they will call on me, but I will not answer; they will earnestly seek me, but will not find me.
29 ULB ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು. BSB BSB: For they hated knowledge and chose not to fear the LORD.
30 ULB ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. BSB BSB: They accepted none of my counsel; they despised all my reproof.
31 ULB ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು. BSB BSB: So they will eat the fruit of their own way, and be filled with their own devices.
32 ULB ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. BSB BSB: For the waywardness of the simple will slay them, and the complacency of fools will destroy them.
33 ULB ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು>> ಎಂಬುದೇ. BSB BSB: But whoever listens to me will dwell in safety, secure from the fear of evil.”
Select verses for actions: Enter goes to them and Escape comes back.