1 ULB ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ. BSB BSB: The proverbs of Solomon: A wise son brings joy to his father, but a foolish son grief to his mother.
2 ULB ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು. BSB BSB: Ill-gotten treasures profit nothing, but righteousness brings deliverance from death.
3 ULB ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ. BSB BSB: The LORD does not let the righteous go hungry, but He denies the craving of the wicked.
4 ULB ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ. BSB BSB: Idle hands make one poor, but diligent hands bring wealth.
5 ULB ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. BSB BSB: He who gathers in summer is a wise son, but he who sleeps during harvest is a disgraceful son.
6 ULB ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ. BSB BSB: Blessings are on the head of the righteous, but the mouth of the wicked conceals violence.
7 ULB ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ. BSB BSB: The memory of the righteous is a blessing, but the name of the wicked will rot.
8 ULB ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು. BSB BSB: A wise heart will receive commandments, but foolish lips will come to ruin.
9 ULB ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು. BSB BSB: He who walks in integrity walks securely, but he who perverts his ways will be found out.
10 ULB ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು. BSB BSB: He who winks the eye causes grief, and foolish lips will come to ruin.
11 ULB ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ. BSB BSB: The mouth of the righteous is a fountain of life, but the mouth of the wicked conceals violence.
12 ULB ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ. BSB BSB: Hatred stirs up dissension, but love covers all transgressions.
13 ULB ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ. BSB BSB: Wisdom is found on the lips of the discerning, but a rod is for the back of him who lacks judgment.
14 ULB ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ. BSB BSB: The wise store up knowledge, but the mouth of the fool invites destruction.
15 ULB ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ. BSB BSB: The wealth of the rich man is his fortified city, but poverty is the ruin of the poor.
16 ULB ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ. BSB BSB: The labor of the righteous leads to life, but the gain of the wicked brings punishment.
17 ULB ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು. BSB BSB: Whoever heeds instruction is on the path to life, but he who ignores reproof goes astray.
18 ULB ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ. BSB BSB: The one who conceals hatred has lying lips, and whoever spreads slander is a fool.
19 ULB ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ. BSB BSB: When words are many, sin is unavoidable, but he who restrains his lips is wise.
20 ULB ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು. BSB BSB: The tongue of the righteous is choice silver, but the heart of the wicked has little worth.
21 ULB ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ. BSB BSB: The lips of the righteous feed many, but fools die for lack of judgment.
22 ULB ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು. BSB BSB: The blessing of the LORD enriches, and He adds no sorrow to it.
23 ULB ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ. BSB BSB: The fool delights in shameful conduct, but a man of understanding has wisdom.
24 ULB ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು. BSB BSB: What the wicked man dreads will overtake him, but the desire of the righteous will be granted.
25 ULB ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ. BSB BSB: When the whirlwind passes, the wicked are no more, but the righteous are secure forever.
26 ULB ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ. BSB BSB: Like vinegar to the teeth and smoke to the eyes, so is the slacker to those who send him.
27 ULB ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ. BSB BSB: The fear of the LORD prolongs life, but the years of the wicked will be cut short.
28 ULB ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ. BSB BSB: The hope of the righteous is joy, but the expectations of the wicked will perish.
29 ULB ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ. BSB BSB: The way of the LORD is a refuge to the upright, but destruction awaits those who do evil.
30 ULB ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು. BSB BSB: The righteous will never be shaken, but the wicked will not inhabit the land.
31 ULB ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. BSB BSB: The mouth of the righteous brings forth wisdom, but a perverse tongue will be cut out.
32 ULB ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. BSB BSB: The lips of the righteous know what is fitting, but the mouth of the wicked is perverse.
Select verses for actions: Enter goes to them and Escape comes back.