1 ULB ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ. BSB BSB: Whoever loves discipline loves knowledge, but he who hates correction is stupid.
2 ULB ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು. BSB BSB: The good man obtains favor from the LORD, but the LORD condemns a man who devises evil.
3 ULB ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ. BSB BSB: A man cannot be established through wickedness, but the righteous cannot be uprooted.
4 ULB ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ. BSB BSB: A wife of noble character is her husband’s crown, but she who causes shame is like decay in his bones.
5 ULB ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ. BSB BSB: The plans of the righteous are just, but the counsel of the wicked leads to deceit.
6 ULB ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ. BSB BSB: The words of the wicked lie in wait for blood, but the speech of the upright rescues them.
7 ULB ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು. BSB BSB: The wicked are overthrown and perish, but the house of the righteous will stand.
8 ULB ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು. BSB BSB: A man is praised according to his wisdom, but a twisted mind is despised.
9 ULB ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು. BSB BSB: Better to be lightly esteemed yet have a servant, than to be self-important but lack food.
11 ULB ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ. BSB BSB: The one who works his land will have plenty of food, but whoever chases fantasies lacks judgment.
12 ULB ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ. BSB BSB: The wicked desire the plunder of evil men, but the root of the righteous flourishes.
13 ULB ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. BSB BSB: An evil man is trapped by his rebellious speech, but a righteous man escapes from trouble.
14 ULB ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು. BSB BSB: By fruitful speech a man is filled with good things, and the work of his hands returns to him.
15 ULB ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು. BSB BSB: The way of a fool is right in his own eyes, but a wise man listens to counsel.
16 ULB ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು. BSB BSB: A fool’s anger is known at once, but a prudent man overlooks an insult.
17 ULB ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು. BSB BSB: He who speaks the truth declares what is right, but a false witness speaks deceit.
18 ULB ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು. BSB BSB: Speaking rashly is like a piercing sword, but the tongue of the wise brings healing.
19 ULB ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ. BSB BSB: Truthful lips endure forever, but a lying tongue lasts only a moment.
20 ULB ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ. BSB BSB: Deceit is in the hearts of those who devise evil, but the counselors of peace have joy.
21 ULB ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು. BSB BSB: No harm befalls the righteous, but the wicked are filled with trouble.
22 ULB ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ. BSB BSB: Lying lips are detestable to the LORD, but those who deal faithfully are His delight.
23 ULB ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು. BSB BSB: A shrewd man keeps his knowledge to himself, but a foolish heart proclaims its folly.
24 ULB ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು. BSB BSB: The hand of the diligent will rule, but laziness ends in forced labor.
25 ULB ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು. BSB BSB: Anxiety weighs down the heart of a man, but a good word cheers it up.
26 ULB ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು. BSB BSB: A righteous man is cautious in friendship, but the ways of the wicked lead them astray.
27 ULB ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು. BSB BSB: A lazy man does not roast his game, but a diligent man prizes his possession.
28 ULB ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ. BSB BSB: There is life in the path of righteousness, but another path leads to death.
Select verses for actions: Enter goes to them and Escape comes back.