1 ULB ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು. BSB BSB: A wise son heeds his father’s discipline, but a mocker does not listen to rebuke.
2 ULB ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ. BSB BSB: From the fruit of his lips a man enjoys good things, but the desire of the faithless is violence.
3 ULB ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು. BSB BSB: He who guards his mouth protects his life, but the one who opens his lips invites his own ruin.
4 ULB ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ. BSB BSB: The slacker craves yet has nothing, but the soul of the diligent is fully satisfied.
5 ULB ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ. BSB BSB: The righteous hate falsehood, but the wicked bring shame and disgrace.
6 ULB ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು. BSB BSB: Righteousness guards the man of integrity, but wickedness undermines the sinner.
7 ULB ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ. BSB BSB: One pretends to be rich, but has nothing; another pretends to be poor, yet has great wealth.
8 ULB ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ. BSB BSB: Riches may ransom a man’s life, but a poor man hears no threat.
9 ULB ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು. BSB BSB: The light of the righteous shines brightly, but the lamp of the wicked is extinguished.
10 ULB ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ. BSB BSB: Arrogance leads only to strife, but wisdom is with the well-advised.
11 ULB ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು. BSB BSB: Dishonest wealth will dwindle, but what is earned through hard work will be multiplied.
12 ULB ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು. BSB BSB: Hope deferred makes the heart sick, but desire fulfilled is a tree of life.
13 ULB ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು. BSB BSB: He who despises instruction will pay the penalty, but the one who respects a command will be rewarded.
14 ULB ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು. BSB BSB: The teaching of the wise is a fountain of life, turning one from the snares of death.
15 ULB ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ. BSB BSB: Good understanding wins favor, but the way of the faithless is difficult.
16 ULB ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು. BSB BSB: Every prudent man acts with knowledge, but a fool displays his folly.
17 ULB ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು. BSB BSB: A wicked messenger falls into trouble, but a faithful envoy brings healing.
18 ULB ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ. BSB BSB: Poverty and shame come to him who ignores discipline, but whoever heeds correction is honored.
19 ULB ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ. BSB BSB: Desire fulfilled is sweet to the soul, but turning from evil is detestable to fools.
20 ULB ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು. BSB BSB: He who walks with the wise will become wise, but the companion of fools will be destroyed.
21 ULB ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು. BSB BSB: Disaster pursues sinners, but prosperity is the reward of the righteous.
22 ULB ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು. BSB BSB: A good man leaves an inheritance to his children’s children, but the sinner’s wealth is passed to the righteous.
23 ULB ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು. BSB BSB: Abundant food is in the fallow ground of the poor, but without justice it is swept away.
24 ULB ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ. BSB BSB: He who spares the rod hates his son, but he who loves him disciplines him diligently.
25 ULB ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು. BSB BSB: A righteous man eats to his heart’s content, but the stomach of the wicked is empty.
Select verses for actions: Enter goes to them and Escape comes back.