1 ULB ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು. BSB BSB: Every wise woman builds her house, but a foolish one tears it down with her own hands.
2 ULB ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. BSB BSB: He who walks in uprightness fears the LORD, but the one who is devious in his ways despises Him.
3 ULB ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. BSB BSB: The proud speech of a fool brings a rod to his back, but the lips of the wise protect them.
4 ULB ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು. BSB BSB: Where there are no oxen, the manger is empty, but an abundant harvest comes through the strength of the ox.
5 ULB ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. BSB BSB: An honest witness does not deceive, but a dishonest witness pours forth lies.
6 ULB ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು. BSB BSB: A mocker seeks wisdom and finds none, but knowledge comes easily to the discerning.
7 ULB ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ. BSB BSB: Stay away from a foolish man; you will gain no knowledge from his speech.
8 ULB ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ. BSB BSB: The wisdom of the prudent is to discern his way, but the folly of fools deceives them.
9 ULB ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು. BSB BSB: Fools mock the making of amends, but goodwill is found among the upright.
10 ULB ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ. BSB BSB: The heart knows its own bitterness, and no stranger shares in its joy.
11 ULB ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ. BSB BSB: The house of the wicked will be destroyed, but the tent of the upright will flourish.
12 ULB ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ. BSB BSB: There is a way that seems right to a man, but its end is the way of death.
13 ULB ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ. BSB BSB: Even in laughter the heart may ache, and joy may end in sorrow.
14 ULB ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. BSB BSB: The backslider in heart receives the fill of his own ways, but a good man is rewarded for his ways.
16 ULB ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. BSB BSB: A wise man fears and turns from evil, but a fool is careless and reckless.
17 ULB ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು. BSB BSB: A quick-tempered man acts foolishly, and a devious man is hated.
18 ULB ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ. BSB BSB: The simple inherit folly, but the prudent are crowned with knowledge.
19 ULB ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು. BSB BSB: The evil bow before the good, and the wicked at the gates of the righteous.
20 ULB ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು. BSB BSB: The poor man is hated even by his neighbor, but many are those who love the rich.
21 ULB ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು. BSB BSB: He who despises his neighbor sins, but blessed is he who shows kindness to the poor.
22 ULB ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು. BSB BSB: Do not those who contrive evil go astray? But those who plan goodness find loving devotion and faithfulness.
23 ULB ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ. BSB BSB: There is profit in all labor, but mere talk leads only to poverty.
24 ULB ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ. BSB BSB: The crown of the wise is their wealth, but the effort of fools is folly.
25 ULB ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ. BSB BSB: A truthful witness saves lives, but one who utters lies is deceitful.
26 ULB ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು. BSB BSB: He who fears the LORD is secure in confidence, and his children shall have a place of refuge.
27 ULB ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ. BSB BSB: The fear of the LORD is a fountain of life, turning a man from the snares of death.
28 ULB ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ. BSB BSB: A large population is a king’s splendor, but a lack of subjects is a prince’s ruin.
29 ULB ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು. BSB BSB: A patient man has great understanding, but a quick-tempered man promotes folly.
30 ULB ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು. BSB BSB: A tranquil heart is life to the body, but envy rots the bones.
31 ULB ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. BSB BSB: Whoever oppresses the poor taunts their Maker, but whoever is kind to the needy honors Him.
32 ULB ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು. BSB BSB: The wicked man is thrown down by his own sin, but the righteous man has a refuge even in death.
33 ULB ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು. BSB BSB: Wisdom rests in the heart of the discerning; even among fools she is known.
34 ULB ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. BSB BSB: Righteousness exalts a nation, but sin is a disgrace to any people.
35 ULB ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ. BSB BSB: A king delights in a wise servant, but his anger falls on the shameful.
Select verses for actions: Enter goes to them and Escape comes back.