1 ULB ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು. BSB BSB: Better a dry morsel in quietness than a house full of feasting with strife.
2 ULB ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು. BSB BSB: A wise servant will rule over a disgraceful son and share his inheritance as one of the brothers.
3 ULB ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ. BSB BSB: A crucible for silver and a furnace for gold, but the LORD is the tester of hearts.
4 ULB ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. BSB BSB: A wicked man listens to evil lips; a liar gives ear to a destructive tongue.
5 ULB ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು. BSB BSB: He who mocks the poor insults their Maker; whoever gloats over calamity will not go unpunished.
6 ULB ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ. BSB BSB: Grandchildren are the crown of the aged, and the glory of a son is his father.
7 ULB ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ. BSB BSB: Eloquent words are unfit for a fool; how much worse are lying lips to a ruler!
8 ULB ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ. BSB BSB: A bribe is a charm to its giver; wherever he turns, he succeeds.
9 ULB ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. BSB BSB: Whoever conceals an offense promotes love, but he who brings it up separates friends.
10 ULB ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. BSB BSB: A rebuke cuts into a man of discernment deeper than a hundred lashes cut into a fool.
11 ULB ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು. BSB BSB: An evil man seeks only rebellion; a cruel messenger will be sent against him.
12 ULB ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. BSB BSB: It is better to meet a bear robbed of her cubs than a fool in his folly.
13 ULB ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು. BSB BSB: If anyone returns evil for good, evil will never leave his house.
14 ULB ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು. BSB BSB: To start a quarrel is to release a flood; so abandon the dispute before it breaks out.
15 ULB ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. BSB BSB: Acquitting the guilty and condemning the righteous—both are detestable to the LORD.
16 ULB ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ. BSB BSB: Why should the fool have money in his hand with no intention of buying wisdom?
17 ULB ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ. BSB BSB: A friend loves at all times, and a brother is born for adversity.
18 ULB ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ. BSB BSB: A man lacking judgment strikes hands in pledge and puts up security for his neighbor.
19 ULB ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. BSB BSB: He who loves transgression loves strife; he who builds his gate high invites destruction.
20 ULB ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು. BSB BSB: The one with a perverse heart finds no good, and he whose tongue is deceitful falls into trouble.
21 ULB ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ. BSB BSB: A man fathers a fool to his own grief; the father of a fool has no joy.
22 ULB ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ. BSB BSB: A joyful heart is good medicine, but a broken spirit dries up the bones.
23 ULB ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು. BSB BSB: A wicked man takes a covert bribe to subvert the course of justice.
24 ULB ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. BSB BSB: Wisdom is the focus of the discerning, but the eyes of a fool wander to the ends of the earth.
25 ULB ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ. BSB BSB: A foolish son brings grief to his father and bitterness to her who bore him.
26 ULB ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ. BSB BSB: It is surely not good to punish the innocent or to flog a noble for his honesty.
27 ULB ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ. BSB BSB: A man of knowledge restrains his words, and a man of understanding maintains a calm spirit.
28 ULB ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. BSB BSB: Even a fool is considered wise if he keeps silent, and discerning when he holds his tongue.
Select verses for actions: Enter goes to them and Escape comes back.