1 ULB ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. BSB BSB: He who isolates himself pursues selfish desires; he rebels against all sound judgment.
2 ULB ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ. BSB BSB: A fool does not delight in understanding, but only in airing his opinions.
3 ULB ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ. BSB BSB: With a wicked man comes contempt as well, and shame is accompanied by disgrace.
4 ULB ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ. BSB BSB: The words of a man’s mouth are deep waters; the fountain of wisdom is a bubbling brook.
5 ULB ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ. BSB BSB: Showing partiality to the wicked is not good, nor is depriving the innocent of justice.
6 ULB ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ. BSB BSB: A fool’s lips bring him strife, and his mouth invites a beating.
7 ULB ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ. BSB BSB: A fool’s mouth is his ruin, and his lips are a snare to his soul.
8 ULB ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು. BSB BSB: The words of a gossip are like choice morsels that go down into the inmost being.
9 ULB ಕೆಲಸಗಳ್ಳನು ಕೆಡುಕನಿಗೆ ತಮ್ಮ. BSB BSB: Whoever is slothful in his work is brother to him who destroys.
10 ULB ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು. BSB BSB: The name of the LORD is a strong tower; the righteous run to it and are safe.
11 ULB ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ. BSB BSB: A rich man’s wealth is his fortified city; it is like a high wall in his imagination.
12 ULB ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ. BSB BSB: Before his downfall a man’s heart is proud, but humility comes before honor.
13 ULB ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು. BSB BSB: He who answers a matter before he hears it—this is folly and disgrace to him.
14 ULB ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು? BSB BSB: The spirit of a man can endure his sickness, but who can survive a broken spirit?
15 ULB ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು. BSB BSB: The heart of the discerning acquires knowledge, and the ear of the wise seeks it out.
16 ULB ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ. BSB BSB: A man’s gift opens doors for him, and brings him before great men.
17 ULB ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು. BSB BSB: The first to state his case seems right until another comes and cross-examines him.
18 ULB ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು. BSB BSB: Casting the lot ends quarrels and separates strong opponents.
19 ULB ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ. BSB BSB: An offended brother is harder to win than a fortified city, and disputes are like the bars of a castle.
20 ULB ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು. BSB BSB: From the fruit of his mouth a man’s belly is filled; with the harvest from his lips he is satisfied.
21 ULB ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು, BSB BSB: Life and death are in the power of the tongue, and those who love it will eat its fruit.
22 ULB ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ. BSB BSB: He who finds a wife finds a good thing and obtains favor from the LORD.
23 ULB ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು. BSB BSB: The poor man pleads for mercy, but the rich man answers harshly.
24 ULB ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು. BSB BSB: A man of many companions may come to ruin, but there is a friend who stays closer than a brother.
Select verses for actions: Enter goes to them and Escape comes back.