1 ULB ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ. BSB BSB: Better a poor man who walks with integrity than a fool whose lips are perverse.
2 ULB ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು. BSB BSB: Even zeal is no good without knowledge, and he who hurries his footsteps misses the mark.
3 ULB ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು. BSB BSB: A man’s own folly subverts his way, yet his heart rages against the LORD.
4 ULB ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು. BSB BSB: Wealth attracts many friends, but a poor man is deserted by his friend.
5 ULB ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು. BSB BSB: A false witness will not go unpunished, and one who utters lies will not escape.
6 ULB ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ. BSB BSB: Many seek the favor of the prince, and everyone is a friend of the gift giver.
7 ULB ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು. BSB BSB: All the brothers of a poor man hate him—how much more do his friends avoid him! He may pursue them with pleading, but they are nowhere to be found.
8 ULB ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು. BSB BSB: He who acquires wisdom loves himself; one who safeguards understanding will find success.
9 ULB ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು. BSB BSB: A false witness will not go unpunished, and one who pours out lies will perish.
10 ULB ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ. BSB BSB: Luxury is unseemly for a fool—how much worse for a slave to rule over princes!
11 ULB ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ. BSB BSB: A man’s insight gives him patience, and his virtue is to overlook an offense.
12 ULB ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ. BSB BSB: A king’s rage is like the roar of a lion, but his favor is like dew on the grass.
13 ULB ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ. BSB BSB: A foolish son is his father’s ruin, and a quarrelsome wife is like a constant dripping.
14 ULB ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ. BSB BSB: Houses and wealth are inherited from fathers, but a prudent wife is from the LORD.
15 ULB ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು. BSB BSB: Laziness brings on deep sleep, and an idle soul will suffer hunger.
16 ULB ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು. BSB BSB: He who keeps a commandment preserves his soul, but he who is careless in his ways will die.
17 ULB ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು. BSB BSB: Kindness to the poor is a loan to the LORD, and He will repay the lender.
18 ULB ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ, BSB BSB: Discipline your son, for in that there is hope; do not be party to his death.
19 ULB ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು. BSB BSB: A man of great anger must pay the penalty; if you rescue him, you will have to do so again.
20 ULB ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ. BSB BSB: Listen to counsel and accept discipline, that you may be wise the rest of your days.
21 ULB ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು. BSB BSB: Many plans are in a man’s heart, but the purpose of the LORD will prevail.
22 ULB ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ. BSB BSB: The desire of a man is loving devotion; better to be poor than a liar.
23 ULB ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು. BSB BSB: The fear of the LORD leads to life, that one may rest content, without visitation from harm.
24 ULB ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು. BSB BSB: The slacker buries his hand in the dish; he will not even bring it back to his mouth.
25 ULB ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು. BSB BSB: Strike a mocker, and the simple will beware; rebuke the discerning man, and he will gain knowledge.
26 ULB ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು. BSB BSB: He who assaults his father or evicts his mother is a son who brings shame and disgrace.
27 ULB ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು. BSB BSB: If you cease to hear instruction, my son, you will stray from the words of knowledge.
28 ULB ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು. BSB BSB: A corrupt witness mocks justice, and a wicked mouth swallows iniquity.
29 ULB ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ. BSB BSB: Judgments are prepared for mockers, and beatings for the backs of fools.
Select verses for actions: Enter goes to them and Escape comes back.