1 ULB ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ, BSB BSB: My son, if you accept my words and hide my commandments within you,
2 ULB ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; BSB BSB: if you incline your ear to wisdom and direct your heart to understanding,
3 ULB ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. BSB BSB: if you truly call out to insight and lift your voice to understanding,
4 ULB ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; BSB BSB: if you seek it like silver and search it out like hidden treasure,
5 ULB ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ. BSB BSB: then you will discern the fear of the LORD and discover the knowledge of God.
6 ULB ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ. BSB BSB: For the LORD gives wisdom; from His mouth come knowledge and understanding.
7 ULB ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು, BSB BSB: He stores up sound wisdom for the upright; He is a shield to those who walk with integrity,
8 ULB ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು. BSB BSB: to guard the paths of justice and protect the way of His saints.
9 ULB ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ. BSB BSB: Then you will discern righteousness and justice and equity—every good path.
10 ULB ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. BSB BSB: For wisdom will enter your heart, and knowledge will delight your soul.
11 ULB ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು. BSB BSB: Discretion will watch over you, and understanding will guard you,
12 ULB ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. BSB BSB: to deliver you from the way of evil, from the man who speaks perversity,
13 ULB ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು. BSB BSB: from those who leave the straight paths to walk in the ways of darkness,
14 ULB ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. BSB BSB: from those who enjoy doing evil and rejoice in the twistedness of evil,
15 ULB ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ. BSB BSB: whose paths are crooked and whose ways are devious.
16 ULB ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು. BSB BSB: It will rescue you from the forbidden woman, from the stranger with seductive words
17 ULB ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. BSB BSB: who abandons the partner of her youth and forgets the covenant of her God.
18 ULB ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. BSB BSB: For her house sinks down to death, and her tracks to the departed spirits.
19 ULB ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ. BSB BSB: None who go to her return or negotiate the paths of life.
20 ULB ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. BSB BSB: So you will follow in the ways of the good, and keep to the paths of the righteous.
21 ULB ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು. BSB BSB: For the upright will inhabit the land, and the blameless will remain in it;
22 ULB ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು. BSB BSB: but the wicked will be cut off from the land, and the unfaithful will be uprooted.
Select verses for actions: Enter goes to them and Escape comes back.