1 ULB ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ. BSB BSB: Wine is a mocker, strong drink is a brawler, and whoever is led astray by them is not wise.
2 ULB ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು. BSB BSB: The terror of a king is like the roar of a lion; whoever provokes him forfeits his own life.
3 ULB ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ. BSB BSB: It is honorable for a man to resolve a dispute, but any fool will quarrel.
4 ULB ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು? BSB BSB: The slacker does not plow in season; at harvest time he looks, but nothing is there.
5 ULB ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು. BSB BSB: The intentions of a man’s heart are deep waters, but a man of understanding draws them out.
6 ULB ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು? BSB BSB: Many a man proclaims his loving devotion, but who can find a trustworthy man?
7 ULB ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು. BSB BSB: The righteous man walks with integrity; blessed are his children after him.
8 ULB ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು. BSB BSB: A king who sits on a throne to judge sifts out all evil with his eyes.
9 ULB <<ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ>> ಎಂದು ಯಾರು ಹೇಳಬಲ್ಲರು? BSB BSB: Who can say, “I have kept my heart pure; I am cleansed from my sin”?
10 ULB ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ. BSB BSB: Differing weights and unequal measures—both are detestable to the LORD.
11 ULB ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು. BSB BSB: Even a young man is known by his actions—whether his conduct is pure and upright.
12 ULB ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ. BSB BSB: Ears that hear and eyes that see—the LORD has made them both.
13 ULB ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ. BSB BSB: Do not love sleep, or you will grow poor; open your eyes, and you will have plenty of food.
14 ULB ಕೊಳ್ಳುವವನು, <<ಚೆನ್ನಾಗಿಲ್ಲ, ಚೆನ್ನಾಗಿಲ್ಲ>> ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ. BSB BSB: “Worthless, worthless!” says the buyer, but on the way out, he gloats.
15 ULB ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ. BSB BSB: There is an abundance of gold and rubies, but lips of knowledge are a rare treasure.
16 ULB ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ. BSB BSB: Take the garment of the one who posts security for a stranger; get collateral if it is for a foreigner.
17 ULB ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು. BSB BSB: Food gained by fraud is sweet to a man, but later his mouth is full of gravel.
18 ULB ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು. BSB BSB: Set plans by consultation, and wage war under sound guidance.
19 ULB ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ. BSB BSB: He who reveals secrets is a constant gossip; avoid the one who babbles with his lips.
20 ULB ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು. BSB BSB: Whoever curses his father or mother, his lamp will be extinguished in deepest darkness.
21 ULB ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು. BSB BSB: An inheritance gained quickly will not be blessed in the end.
22 ULB ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು. BSB BSB: Do not say, “I will avenge this evil!” Wait on the LORD, and He will save you.
23 ULB ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ. BSB BSB: Unequal weights are detestable to the LORD, and dishonest scales are no good.
24 ULB ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು? BSB BSB: A man’s steps are from the LORD, so how can anyone understand his own way?
25 ULB <<ಇದು ದೇವರಿಗಾಗಿ>> ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು. BSB BSB: It is a trap for a man to dedicate something rashly, only later to reconsider his vows.
26 ULB ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು. BSB BSB: A wise king separates out the wicked and drives the threshing wheel over them.
27 ULB ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ. BSB BSB: The spirit of a man is the lamp of the LORD, searching out his inmost being.
28 ULB ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ. BSB BSB: Loving devotion and faithfulness preserve a king; by these he maintains his throne.
29 ULB ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. BSB BSB: The glory of young men is their strength, and gray hair is the splendor of the old.
30 ULB ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು. BSB BSB: Lashes and wounds scour evil, and beatings cleanse the inmost parts.
Select verses for actions: Enter goes to them and Escape comes back.