1 ULB ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ. BSB BSB: The king’s heart is a waterway in the hand of the LORD; He directs it where He pleases.
2 ULB ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು. BSB BSB: All a man’s ways seem right to him, but the LORD weighs the heart.
3 ULB ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. BSB BSB: To do righteousness and justice is more desirable to the LORD than sacrifice.
4 ULB ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ. BSB BSB: Haughty eyes and a proud heart—the guides of the wicked—are sin.
5 ULB ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ. BSB BSB: The plans of the diligent bring plenty, as surely as haste leads to poverty.
6 ULB ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ. BSB BSB: Making a fortune by a lying tongue is a vanishing mist, a deadly pursuit.
7 ULB ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು. BSB BSB: The violence of the wicked will sweep them away because they refuse to do what is just.
8 ULB ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ. BSB BSB: The way of a guilty man is crooked, but the conduct of the innocent is upright.
9 ULB ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. BSB BSB: Better to live on a corner of the roof than to share a house with a quarrelsome wife.
10 ULB ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು. BSB BSB: The soul of the wicked man craves evil; his neighbor finds no favor in his eyes.
11 ULB ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. BSB BSB: When a mocker is punished, the simple gain wisdom; and when a wise man is instructed, he acquires knowledge.
12 ULB ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು. BSB BSB: The Righteous One considers the house of the wicked and brings the wicked to ruin.
13 ULB ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. BSB BSB: Whoever shuts his ears to the cry of the poor, he too shall cry out and receive no answer.
14 ULB ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು. BSB BSB: A gift in secret soothes anger, and a covert bribe pacifies great wrath.
15 ULB ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು. BSB BSB: Justice executed is a joy to the righteous, but a terror to the workers of iniquity.
16 ULB ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ. BSB BSB: The man who strays from the path of understanding will rest in the assembly of the dead.
17 ULB ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. BSB BSB: He who loves pleasure will become poor; the one who loves wine and oil will never be rich.
18 ULB ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು. BSB BSB: The wicked become a ransom for the righteous, and the faithless for the upright.
19 ULB ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು. BSB BSB: Better to live in the desert than with a contentious and ill-tempered wife.
20 ULB ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು. BSB BSB: Precious treasures and oil are in the dwelling of the wise, but a foolish man consumes them.
21 ULB ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು. BSB BSB: He who pursues righteousness and loving devotion finds life, righteousness, and honor.
22 ULB ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು. BSB BSB: A wise man scales the city of the mighty and pulls down the stronghold in which they trust.
23 ULB ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು. BSB BSB: He who guards his mouth and tongue keeps his soul from distress.
24 ULB <<ಧರ್ಮನಿಂದಕ>> ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು. BSB BSB: Mocker is the name of the proud and arrogant man—of him who acts with excessive pride.
25 ULB ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು. BSB BSB: The craving of the slacker kills him because his hands refuse to work.
26 ULB ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು. BSB BSB: All day long he covets more, but the righteous give without restraint.
27 ULB ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ. BSB BSB: The sacrifice of the wicked is detestable—how much more so when brought with ill intent!
28 ULB ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು. BSB BSB: A lying witness will perish, but the man who listens to truth will speak forever.
29 ULB ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು. BSB BSB: A wicked man hardens his face, but the upright man makes his way sure.
30 ULB ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ. BSB BSB: There is no wisdom, no understanding, no counsel that can prevail against the LORD.
31 ULB ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ. BSB BSB: A horse is prepared for the day of battle, but victory is of the LORD.
Select verses for actions: Enter goes to them and Escape comes back.