1 ULB ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. BSB BSB: Do not boast about tomorrow, for you do not know what a day may bring.
2 ULB ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ. BSB BSB: Let another praise you, and not your own mouth—a stranger, and not your own lips.
3 ULB ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ. BSB BSB: A stone is heavy and sand is a burden, but aggravation from a fool outweighs them both.
4 ULB ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು? BSB BSB: Wrath is cruel and anger is like a flood, but who can withstand jealousy?
5 ULB ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು. BSB BSB: Better an open rebuke than love that is concealed.
6 ULB ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ. BSB BSB: The wounds of a friend are faithful, but the kisses of an enemy are deceitful.
7 ULB ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ. BSB BSB: The soul that is full loathes honey, but to a hungry soul, any bitter thing is sweet.
8 ULB ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ. BSB BSB: Like a bird that strays from its nest is a man who wanders from his home.
9 ULB ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ. BSB BSB: Oil and incense bring joy to the heart, and the counsel of a friend is sweetness to the soul.
10 ULB ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು. BSB BSB: Do not forsake your friend or your father’s friend, and do not go to your brother’s house in the day of your calamity; better a neighbor nearby than a brother far away.
11 ULB ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು. BSB BSB: Be wise, my son, and bring joy to my heart, so that I can answer him who taunts me.
12 ULB ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. BSB BSB: The prudent see danger and take cover, but the simple keep going and pay the penalty.
13 ULB ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ. BSB BSB: Take the garment of him who posts security for a stranger; get collateral if it is for a foreigner.
14 ULB ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು. BSB BSB: If one blesses his neighbor with a loud voice early in the morning, it will be counted to him as a curse.
15 ULB ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ. BSB BSB: A constant dripping on a rainy day and a contentious woman are alike—
16 ULB ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು. BSB BSB: restraining her is like holding back the wind or grasping oil with one’s right hand.
17 ULB ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು. BSB BSB: As iron sharpens iron, so one man sharpens another.
18 ULB ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು. BSB BSB: Whoever tends a fig tree will eat its fruit, and he who looks after his master will be honored.
19 ULB ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ. BSB BSB: As water reflects the face, so the heart reflects the true man.
20 ULB ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. BSB BSB: Sheol and Abaddon are never satisfied; so the eyes of man are never satisfied.
21 ULB ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ. BSB BSB: A crucible for silver and a furnace for gold, but a man is tested by the praise accorded him.
22 ULB ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು. BSB BSB: Though you grind a fool like grain with mortar and a pestle, yet his folly will not depart from him.
23 ULB ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು. BSB BSB: Be sure to know the state of your flocks, and pay close attention to your herds;
24 ULB ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ? BSB BSB: for riches are not forever, nor does a crown endure to every generation.
25 ULB ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು. BSB BSB: When hay is removed and new growth appears and the grass from the hills is gathered,
26 ULB ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು. BSB BSB: the lambs will provide you with clothing, and the goats with the price of a field.
27 ULB ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು. BSB BSB: You will have plenty of goats’ milk to feed you—food for your household and nourishment for your maidservants.
Select verses for actions: Enter goes to them and Escape comes back.