1 ULB ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು. BSB BSB: The wicked flee when no one pursues, but the righteous are as bold as a lion.
2 ULB ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು. BSB BSB: A land in rebellion has many rulers, but a man of understanding and knowledge maintains order.
3 ULB ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ. BSB BSB: A destitute leader who oppresses the poor is like a driving rain that leaves no food.
4 ULB ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. BSB BSB: Those who forsake the law praise the wicked, but those who keep the law resist them.
5 ULB ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು. BSB BSB: Evil men do not understand justice, but those who seek the LORD comprehend fully.
6 ULB ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. BSB BSB: Better a poor man who walks with integrity than a rich man whose ways are perverse.
7 ULB ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. BSB BSB: A discerning son keeps the law, but a companion of gluttons disgraces his father.
8 ULB ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು. BSB BSB: He who increases his wealth by interest and usury lays it up for one who is kind to the poor.
9 ULB ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ. BSB BSB: Whoever turns his ear away from hearing the law, even his prayer is detestable.
10 ULB ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು. BSB BSB: He who leads the upright along the path of evil will fall into his own pit, but the blameless will inherit what is good.
11 ULB ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು. BSB BSB: A rich man is wise in his own eyes, but a poor man with discernment sees through him.
12 ULB ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. BSB BSB: When the righteous triumph, there is great glory, but when the wicked rise, men hide themselves.
13 ULB ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. BSB BSB: He who conceals his sins will not prosper, but whoever confesses and renounces them will find mercy.
14 ULB ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು. BSB BSB: Blessed is the man who is always reverent, but he who hardens his heart falls into trouble.
15 ULB ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ. BSB BSB: Like a roaring lion or a charging bear is a wicked ruler over a helpless people.
16 ULB ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು. BSB BSB: A leader who lacks judgment is also a great oppressor, but he who hates dishonest profit will prolong his days.
17 ULB ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು. BSB BSB: A man burdened by bloodguilt will flee into the Pit; let no one support him.
18 ULB ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು. BSB BSB: He who walks with integrity will be kept safe, but whoever is perverse in his ways will suddenly fall.
19 ULB ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ. BSB BSB: The one who works his land will have plenty of food, but whoever chases fantasies will have his fill of poverty.
20 ULB ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು. BSB BSB: A faithful man will abound with blessings, but one eager to be rich will not go unpunished.
21 ULB ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು. BSB BSB: To show partiality is not good, yet a man will do wrong for a piece of bread.
22 ULB ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು. BSB BSB: A stingy man hastens after wealth and does not know that poverty awaits him.
23 ULB ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು. BSB BSB: He who rebukes a man will later find more favor than one who flatters with his tongue.
24 ULB ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು. BSB BSB: He who robs his father or mother, saying, “It is not wrong,” is a companion to the man who destroys.
25 ULB ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು. BSB BSB: A greedy man stirs up strife, but he who trusts in the LORD will prosper.
26 ULB ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. BSB BSB: He who trusts in himself is a fool, but one who walks in wisdom will be safe.
27 ULB ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು. BSB BSB: Whoever gives to the poor will not be in need, but he who hides his eyes will receive many curses.
28 ULB ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. BSB BSB: When the wicked come to power, people hide themselves; but when they perish, the righteous flourish.
Select verses for actions: Enter goes to them and Escape comes back.