1 ULB ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು. BSB BSB: A man who remains stiff-necked after much reproof will suddenly be shattered beyond recovery.
2 ULB ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ. BSB BSB: When the righteous flourish, the people rejoice, but when the wicked rule, the people groan.
3 ULB ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು. BSB BSB: A man who loves wisdom brings joy to his father, but a companion of prostitutes squanders his wealth.
4 ULB ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು. BSB BSB: By justice a king brings stability to the land, but a man who exacts tribute demolishes it.
5 ULB ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು. BSB BSB: A man who flatters his neighbor spreads a net for his feet.
6 ULB ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು. BSB BSB: An evil man is caught by his own sin, but a righteous one sings and rejoices.
7 ULB ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ. BSB BSB: The righteous consider the cause of the poor, but the wicked have no regard for such concerns.
8 ULB ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು. BSB BSB: Mockers inflame a city, but the wise turn away anger.
9 ULB ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ. BSB BSB: If a wise man goes to court with a fool, there will be raving and laughing with no resolution.
10 ULB ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು. BSB BSB: Men of bloodshed hate a blameless man, but the upright care for his life.
11 ULB ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು. BSB BSB: A fool vents all his anger, but a wise man holds it back.
12 ULB ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ. BSB BSB: If a ruler listens to lies, all his officials will be wicked.
13 ULB ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು. BSB BSB: The poor man and the oppressor have this in common: The LORD gives light to the eyes of both.
14 ULB ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು. BSB BSB: A king who judges the poor with fairness—his throne will be established forever.
15 ULB ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು. BSB BSB: A rod of correction imparts wisdom, but a child left to himself disgraces his mother.
16 ULB ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು. BSB BSB: When the wicked thrive, rebellion increases; but the righteous will see their downfall.
17 ULB ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು. BSB BSB: Discipline your son, and he will give you rest; he will bring delight to your soul.
18 ULB ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. BSB BSB: Where there is no vision, the people cast off restraint; but blessed is he who keeps the Law.
19 ULB ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು. BSB BSB: A servant cannot be corrected by words alone; though he understands, he will not respond.
20 ULB ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು. BSB BSB: Do you see a man who speaks in haste? There is more hope for a fool than for him.
21 ULB ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು. BSB BSB: A servant pampered from his youth will bring grief in the end.
22 ULB ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು. BSB BSB: An angry man stirs up dissension, and a hot-tempered man abounds in transgression.
23 ULB ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು. BSB BSB: A man’s pride will bring him low, but a humble spirit will obtain honor.
24 ULB ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು. BSB BSB: A partner to a thief hates his own soul; he receives the oath but does not testify.
25 ULB ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ. BSB BSB: The fear of man is a snare, but whoever trusts in the LORD is set securely on high.
26 ULB ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು. BSB BSB: Many seek the ruler’s favor, but a man receives justice from the LORD.
27 ULB ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು. BSB BSB: An unjust man is detestable to the righteous, and one whose way is upright is detestable to the wicked.
Select verses for actions: Enter goes to them and Escape comes back.