1 ULB ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. BSB BSB: These are the words of Agur son of Jakeh—the burden that this man declared to Ithiel: “I am weary, O God, and worn out.
2 ULB ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ. BSB BSB: Surely I am the most ignorant of men, and I lack the understanding of a man.
3 ULB ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ. BSB BSB: I have not learned wisdom, and I have no knowledge of the Holy One.
4 ULB ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು. BSB BSB: Who has ascended to heaven and come down? Who has gathered the wind in His hands? Who has bound up the waters in His cloak? Who has established all the ends of the earth? What is His name, and what is the name of His Son—surely you know!
5 ULB ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. BSB BSB: Every word of God is flawless; He is a shield to those who take refuge in Him.
6 ULB ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ. BSB BSB: Do not add to His words, lest He rebuke you and prove you a liar.
7 ULB ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು. BSB BSB: Two things I ask of You—do not refuse me before I die:
8 ULB ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. BSB BSB: Keep falsehood and deceitful words far from me. Give me neither poverty nor riches; feed me with the bread that is my portion.
9 ULB ಹಾಗಾಗದೆ ಹೊಟ್ಟೆತುಂಬಿದವನಾದರೆ, <<ಯೆಹೋವನು ಯಾರೋ?>> ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು. BSB BSB: Otherwise, I may have too much and deny You, saying, ‘Who is the LORD?’ Or I may become poor and steal, profaning the name of my God.
10 ULB ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು. BSB BSB: Do not slander a servant to his master, or he will curse you, and you will bear the guilt.
11 ULB ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು. BSB BSB: There is a generation of those who curse their fathers and do not bless their mothers.
12 ULB ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು. BSB BSB: There is a generation of those who are pure in their own eyes and yet unwashed of their filth.
13 ULB ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು. BSB BSB: There is a generation—how haughty are their eyes and pretentious are their glances—
14 ULB ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು. BSB BSB: there is a generation whose teeth are swords and whose jaws are knives, devouring the oppressed from the earth and the needy from among men.
15 ULB ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು. BSB BSB: The leech has two daughters: Give and Give. There are three things that are never satisfied, four that never say, ‘Enough!’:
16 ULB ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. BSB BSB: Sheol, the barren womb, land never satisfied with water, and fire that never says, ‘Enough!’
17 ULB ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು. BSB BSB: As for the eye that mocks a father and scorns obedience to a mother, may the ravens of the valley pluck it out and young vultures devour it.
18 ULB ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; BSB BSB: There are three things too wonderful for me, four that I cannot understand:
19 ULB ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ. BSB BSB: the way of an eagle in the sky, the way of a snake on a rock, the way of a ship at sea, and the way of a man with a maiden.
20 ULB ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, <<ನಾನು ತಪ್ಪುಮಾಡಲಿಲ್ಲವಲ್ಲವೆ>> ಅಂದುಕೊಳ್ಳುವಳು. BSB BSB: This is the way of an adulteress: She eats and wipes her mouth and says, ‘I have done nothing wrong.’
21 ULB ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು. BSB BSB: Under three things the earth trembles, under four it cannot bear up:
22 ULB ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು, BSB BSB: a servant who becomes king, a fool who is filled with food,
23 ULB ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ. BSB BSB: an unloved woman who marries, and a maidservant who supplants her mistress.
24 ULB ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು. BSB BSB: Four things on earth are small, yet they are exceedingly wise:
25 ULB ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು. BSB BSB: The ants are creatures of little strength, yet they store up their food in the summer;
26 ULB ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. BSB BSB: the rock badgers are creatures of little power, yet they make their homes in the rocks;
27 ULB ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು. BSB BSB: the locusts have no king, yet they all advance in formation;
28 ULB ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು. BSB BSB: and the lizard can be caught in one’s hands, yet it is found in the palaces of kings.
29 ULB ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು. BSB BSB: There are three things that are stately in their stride, and four that are impressive in their walk:
30 ULB ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ, BSB BSB: a lion, mighty among beasts, refusing to retreat before anything;
31 ULB ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ. BSB BSB: a strutting rooster; a he-goat; and a king with his army around him.
32 ULB ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ. BSB BSB: If you have foolishly exalted yourself or if you have plotted evil, put your hand over your mouth.
33 ULB ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ. BSB BSB: For as the churning of milk yields butter, and the twisting of the nose draws blood, so the stirring of anger brings forth strife.”
Select verses for actions: Enter goes to them and Escape comes back.