1 ULB ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು. BSB BSB: My son, pay attention to my wisdom; incline your ear to my insight,
2 ULB ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು. BSB BSB: that you may maintain discretion and your lips may preserve knowledge.
3 ULB ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ. BSB BSB: Though the lips of the forbidden woman drip honey and her speech is smoother than oil,
4 ULB ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು. BSB BSB: in the end she is bitter as wormwood, sharp as a double-edged sword.
5 ULB ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. BSB BSB: Her feet go down to death; her steps lead straight to Sheol.
6 ULB ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ. BSB BSB: She does not consider the path of life; she does not know that her ways are unstable.
7 ULB ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ. BSB BSB: So now, my sons, listen to me, and do not turn aside from the words of my mouth.
8 ULB ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ! BSB BSB: Keep your path far from her; do not go near the door of her house,
9 ULB ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು. BSB BSB: lest you concede your vigor to others, and your years to one who is cruel;
10 ULB ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ. BSB BSB: lest strangers feast on your wealth, and your labors enrich the house of a foreigner.
11 ULB ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು, BSB BSB: At the end of your life you will groan when your flesh and your body are spent,
12 ULB <<ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು, BSB BSB: and you will say, “How I hated discipline, and my heart despised reproof!
13 ULB ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! BSB BSB: I did not listen to the voice of my teachers or incline my ear to my mentors.
14 ULB ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು>> ಎಂದು ಅಂದುಕೊಳ್ಳುವಿ. BSB BSB: I am on the brink of utter ruin in the midst of the whole assembly.”
15 ULB ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ. BSB BSB: Drink water from your own cistern, and running water from your own well.
16 ULB ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ? BSB BSB: Why should your springs flow in the streets, your streams of water in the public squares?
17 ULB ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು. BSB BSB: Let them be yours alone, never to be shared with strangers.
18 ULB ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು. BSB BSB: May your fountain be blessed, and may you rejoice in the wife of your youth:
19 ULB ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು. BSB BSB: A loving doe, a graceful fawn—may her breasts satisfy you always; may you be captivated by her love forever.
20 ULB ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ? BSB BSB: Why be captivated, my son, by an adulteress, or embrace the bosom of a stranger?
21 ULB ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ. BSB BSB: For a man’s ways are before the eyes of the LORD, and the LORD examines all his paths.
22 ULB ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು. BSB BSB: The iniquities of a wicked man entrap him; the cords of his sin entangle him.
23 ULB ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು. BSB BSB: He dies for lack of discipline, led astray by his own great folly.
Select verses for actions: Enter goes to them and Escape comes back.