1 ULB ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ, BSB BSB: My son, if you have put up security for your neighbor, if you have struck hands in pledge with a stranger,
2 ULB ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. BSB BSB: if you have been trapped by the words of your lips, ensnared by the words of your mouth,
3 ULB ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, BSB BSB: then do this, my son, to free yourself, for you have fallen into your neighbor’s hands: Go, humble yourself, and press your plea with your neighbor.
4 ULB ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; BSB BSB: Allow no sleep to your eyes or slumber to your eyelids.
5 ULB ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ. BSB BSB: Free yourself, like a gazelle from the hand of the hunter, like a bird from the snare of the fowler.
6 ULB ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. BSB BSB: Walk in the manner of the ant, O slacker; observe its ways and become wise.
7 ULB ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, BSB BSB: Without a commander, without an overseer or ruler,
8 ULB ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು. BSB BSB: it prepares its provisions in summer; it gathers its food at harvest.
9 ULB ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ? BSB BSB: How long will you lie there, O slacker? When will you get up from your sleep?
10 ULB <<ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ>> ಅಂದುಕೊಳ್ಳುವಿಯಾ? BSB BSB: A little sleep, a little slumber, a little folding of the hands to rest,
11 ULB ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. BSB BSB: and poverty will come upon you like a robber, and need like a bandit.
12 ULB ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ, BSB BSB: A worthless person, a wicked man, walks with a perverse mouth,
13 ULB ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ. BSB BSB: winking his eyes, speaking with his feet, and pointing with his fingers.
14 ULB ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ. BSB BSB: With deceit in his heart he devises evil; he continually sows discord.
15 ULB ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು. BSB BSB: Therefore calamity will come upon him suddenly; in an instant he will be shattered beyond recovery.
16 ULB ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. BSB BSB: There are six things that the LORD hates, seven that are detestable to Him:
17 ULB ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ, BSB BSB: haughty eyes, a lying tongue, hands that shed innocent blood,
18 ULB ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, BSB BSB: a heart that devises wicked schemes, feet that run swiftly to evil,
19 ULB ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ. BSB BSB: a false witness who gives false testimony, and one who stirs up discord among brothers.
20 ULB ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ. BSB BSB: My son, keep your father’s commandment, and do not forsake your mother’s teaching.
21 ULB ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. BSB BSB: Bind them always upon your heart; tie them around your neck.
22 ULB ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು. BSB BSB: When you walk, they will guide you; when you lie down, they will watch over you; when you awake, they will speak to you.
23 ULB ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. BSB BSB: For this commandment is a lamp, this teaching is a light, and the reproofs of discipline are the way to life,
24 ULB ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. BSB BSB: to keep you from the evil woman, from the smooth tongue of the adulteress.
25 ULB ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. BSB BSB: Do not lust in your heart for her beauty or let her captivate you with her eyes.
26 ULB ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. BSB BSB: For the levy of the prostitute is poverty, and the adulteress preys upon your very life.
27 ULB ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ? BSB BSB: Can a man embrace fire and his clothes not be burned?
28 ULB ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ? BSB BSB: Can a man walk on hot coals without scorching his feet?
29 ULB ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. BSB BSB: So is he who sleeps with another man’s wife; no one who touches her will go unpunished.
30 ULB ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. BSB BSB: Men do not despise the thief if he steals to satisfy his hunger.
31 ULB ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. BSB BSB: Yet if caught, he must pay sevenfold; he must give up all the wealth of his house.
32 ULB ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. BSB BSB: He who commits adultery lacks judgment; whoever does so destroys himself.
33 ULB ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. BSB BSB: Wounds and dishonor will befall him, and his reproach will never be wiped away.
34 ULB ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು. BSB BSB: For jealousy enrages a husband, and he will show no mercy in the day of vengeance.
35 ULB ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು. BSB BSB: He will not be appeased by any ransom, or persuaded by lavish gifts.
Select verses for actions: Enter goes to them and Escape comes back.