1 ULB ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ. BSB BSB: My son, keep my words and treasure my commandments within you.
2 ULB ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು. BSB BSB: Keep my commandments and live; guard my teachings as the apple of your eye.
3 ULB ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ. BSB BSB: Tie them to your fingers; write them on the tablet of your heart.
4 ULB ಜ್ಞಾನವನ್ನು, <<ನೀನು ನನ್ನ ಅಕ್ಕಾ>> ಎಂದು ಹೇಳು, ವಿವೇಕವನ್ನು, <<ಪ್ರಿಯೇ>> ಎಂದು ಕರೆ. BSB BSB: Say to wisdom, “You are my sister,” and call understanding your kinsman,
5 ULB ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು. BSB BSB: that they may keep you from the adulteress, from the stranger with seductive words.
6 ULB ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು BSB BSB: For at the window of my house I looked through the lattice.
7 ULB ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು. BSB BSB: I saw among the simple, I noticed among the youths, a young man lacking judgment,
8 ULB ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ, BSB BSB: crossing the street near her corner, strolling down the road to her house,
9 ULB ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು. BSB BSB: at twilight, as the day was fading into the dark of the night.
10 ULB ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. BSB BSB: Then a woman came out to meet him, with the attire of a harlot and cunning of heart.
11 ULB ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ; BSB BSB: She is loud and defiant; her feet do not remain at home.
12 ULB ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು. BSB BSB: Now in the street, now in the squares, she lurks at every corner.
13 ULB ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ, BSB BSB: She seizes him and kisses him; she brazenly says to him:
14 ULB <<ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ, BSB BSB: “I have made my peace offerings; today I have paid my vows.
15 ULB ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು. BSB BSB: So I came out to meet you; I sought you, and I have found you.
16 ULB ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ. BSB BSB: I have decked my bed with coverings, with colored linen from Egypt.
17 ULB ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ. BSB BSB: I have perfumed my bed with myrrh, with aloes, and with cinnamon.
18 ULB ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ. BSB BSB: Come, let us take our fill of love till morning. Let us delight in loving caresses!
19 ULB ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ. BSB BSB: For my husband is not at home; he has gone on a long journey.
20 ULB ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು>> ಎಂದು ಹೇಳುವಳು. BSB BSB: He took with him a bag of money and will not return till the moon is full.”
21 ULB ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ. BSB BSB: With her great persuasion she entices him; with her flattering lips she lures him.
22 ULB ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ, BSB BSB: He follows her on impulse, like an ox going to the slaughter, like a deer bounding into a trap,
23 ULB ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. BSB BSB: until an arrow pierces his liver, like a bird darting into a snare—not knowing it will cost him his life.
24 ULB ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ. BSB BSB: Now, my sons, listen to me, and attend to the words of my mouth.
25 ULB ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ. BSB BSB: Do not let your heart turn aside to her ways; do not stray into her paths.
26 ULB ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ. BSB BSB: For she has brought many down to death; her slain are many in number.
27 ULB ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. BSB BSB: Her house is the road to Sheol, descending to the chambers of death.
Select verses for actions: Enter goes to them and Escape comes back.