1 ULB ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ? BSB BSB: Does not wisdom call out, and understanding raise her voice?
2 ULB ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ. BSB BSB: On the heights overlooking the road, at the crossroads she takes her stand.
3 ULB ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ, BSB BSB: Beside the gates to the city, at the entrances she cries out:
4 ULB <<ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ. BSB BSB: “To you, O men, I call out, and my cry is to the sons of men.
5 ULB ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. BSB BSB: O simple ones, learn to be shrewd; O fools, gain understanding.
6 ULB ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, BSB BSB: Listen, for I speak of noble things, and the opening of my lips will reveal right.
7 ULB ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ. BSB BSB: For my mouth will speak the truth, and wickedness is detestable to my lips.
8 ULB ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ. BSB BSB: All the words of my mouth are righteous; none are crooked or perverse.
9 ULB ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. BSB BSB: They are all plain to the discerning, and upright to those who find knowledge.
10 ULB ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ. BSB BSB: Receive my instruction instead of silver, and knowledge rather than pure gold.
11 ULB ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. BSB BSB: For wisdom is more precious than rubies, and nothing you desire compares with her.
12 ULB ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ. BSB BSB: I, wisdom, dwell together with prudence, and I find knowledge and discretion.
13 ULB ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ. BSB BSB: To fear the LORD is to hate evil; I hate arrogant pride, evil conduct, and perverse speech.
14 ULB ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ. BSB BSB: Counsel and sound judgment are mine; I have insight and strength.
15 ULB ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು. BSB BSB: By me kings reign, and rulers enact just laws;
16 ULB ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. BSB BSB: By me princes rule, and all nobles who govern justly.
17 ULB ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. BSB BSB: I love those who love me, and those who seek me early shall find me.
18 ULB ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ. BSB BSB: With me are riches and honor, enduring wealth and righteousness.
19 ULB ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. BSB BSB: My fruit is better than gold, pure gold, and my harvest surpasses choice silver.
20 ULB ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ. BSB BSB: I walk in the way of righteousness, along the paths of justice,
21 ULB ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು. BSB BSB: bestowing wealth on those who love me and making their treasuries full.
23 ULB ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. BSB BSB: From everlasting I was established, from the beginning, before the earth began.
24 ULB ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು. BSB BSB: When there were no watery depths, I was brought forth, when no springs were overflowing with water.
25 ULB ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, BSB BSB: Before the mountains were settled, before the hills, I was brought forth,
26 ULB ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. BSB BSB: before He made the land or fields, or any of the dust of the earth.
27 ULB ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು. BSB BSB: I was there when He established the heavens, when He inscribed a circle on the face of the deep,
28 ULB ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. BSB BSB: when He established the clouds above, when the fountains of the deep gushed forth,
29 ULB ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, BSB BSB: when He set a boundary for the sea, so that the waters would not surpass His command, when He marked out the foundations of the earth.
30 ULB ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ, BSB BSB: Then I was a skilled craftsman at His side, and His delight day by day, rejoicing always in His presence.
31 ULB ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. BSB BSB: I was rejoicing in His whole world, delighting together in the sons of men.
32 ULB ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ. BSB BSB: Now therefore, my sons, listen to me, for blessed are those who keep my ways.
33 ULB ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ. BSB BSB: Listen to instruction and be wise; do not ignore it.
34 ULB ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು. BSB BSB: Blessed is the man who listens to me, watching daily at my doors, waiting at the posts of my doorway.
35 ULB ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು. BSB BSB: For whoever finds me finds life and obtains the favor of the LORD.
36 ULB ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.>> BSB BSB: But he who fails to find me harms himself; all who hate me love death.”
Select verses for actions: Enter goes to them and Escape comes back.