1 ULB ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. BSB BSB: Wisdom has built her house; she has carved out her seven pillars.
2 ULB ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. BSB BSB: She has prepared her meat and mixed her wine; she has also set her table.
3 ULB ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. BSB BSB: She has sent out her maidservants; she calls out from the heights of the city.
4 ULB ಆಕೆಯು ಬುದ್ಧಿಹೀನರಿಗೆ, <<ಮೂಢನಾಗಿರುವವನು ಈ ಕಡೆಗೆ ತಿರುಗಲಿ, BSB BSB: “Whoever is simple, let him turn in here!” she says to him who lacks judgment.
5 ULB ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. BSB BSB: “Come, eat my bread and drink the wine I have mixed.
6 ULB ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ>> ಎಂದು ಪ್ರಬೋಧಿಸುತ್ತಾಳೆ. BSB BSB: Leave your folly behind, and you will live; walk in the way of understanding.”
7 ULB ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. BSB BSB: He who corrects a mocker brings shame on himself; he who rebukes a wicked man taints himself.
8 ULB ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. BSB BSB: Do not rebuke a mocker, or he will hate you; rebuke a wise man, and he will love you.
9 ULB ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು. BSB BSB: Instruct a wise man, and he will be wiser still; teach a righteous man, and he will increase his learning.
10 ULB ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. BSB BSB: The fear of the LORD is the beginning of wisdom, and knowledge of the Holy One is understanding.
11 ULB ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು. BSB BSB: For through wisdom your days will be multiplied, and years will be added to your life.
12 ULB ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ. BSB BSB: If you are wise, you are wise to your own advantage; but if you scoff, you alone will bear the consequences.
13 ULB ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು. BSB BSB: The woman named Folly is loud; she is naive and knows nothing.
14 ULB ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ, BSB BSB: She sits at the door of her house, on a seat in the heights of the city,
15 ULB ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ, BSB BSB: calling out to those who pass by, who make their paths straight.
16 ULB <<ಮೂಢನಾಗಿರುವವನು ಈ ಕಡೆಗೆ ತಿರುಗಲಿ>> ಎಂದು ಕೂಗಿ, BSB BSB: “Whoever is simple, let him turn in here!” she says to him who lacks judgment.
17 ULB <<ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ>> ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ. BSB BSB: “Stolen water is sweet, and bread eaten in secret is tasty!”
18 ULB ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. BSB BSB: But they do not know that the dead are there, that her guests are in the depths of Sheol.
Select verses for actions: Enter goes to them and Escape comes back.