1 ULB ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. BSB BSB: Of David. Bless the LORD, O my soul; all that is within me, bless His holy name.
2 ULB ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. BSB BSB: Bless the LORD, O my soul, and do not forget all His kind deeds—
3 ULB ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, BSB BSB: He who forgives all your iniquities and heals all your diseases,
4 ULB ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. BSB BSB: who redeems your life from the Pit and crowns you with loving devotion and compassion,
5 ULB ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ. BSB BSB: who satisfies you with good things, so that your youth is renewed like the eagle’s.
6 ULB ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ. BSB BSB: The LORD executes righteousness and justice for all the oppressed.
7 ULB ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು. BSB BSB: He made known His ways to Moses, His deeds to the people of Israel.
8 ULB ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. BSB BSB: The LORD is compassionate and gracious, slow to anger, abounding in loving devotion.
9 ULB ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. BSB BSB: He will not always accuse us, nor harbor His anger forever.
10 ULB ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. BSB BSB: He has not dealt with us according to our sins or repaid us according to our iniquities.
11 ULB ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. BSB BSB: For as high as the heavens are above the earth, so great is His loving devotion for those who fear Him.
12 ULB ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. BSB BSB: As far as the east is from the west, so far has He removed our transgressions from us.
13 ULB ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. BSB BSB: As a father has compassion on his children, so the LORD has compassion on those who fear Him.
14 ULB ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. BSB BSB: For He knows our frame; He is mindful that we are dust.
15 ULB ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. BSB BSB: As for man, his days are like grass—he blooms like a flower of the field;
16 ULB ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. BSB BSB: when the wind passes over, it vanishes, and its place remembers it no more.
17 ULB ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. BSB BSB: But from everlasting to everlasting the loving devotion of the LORD extends to those who fear Him, and His righteousness to their children’s children—
18 ULB ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. BSB BSB: to those who keep His covenant and remember to obey His precepts.
19 ULB ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ. BSB BSB: The LORD has established His throne in heaven, and His kingdom rules over all.
20 ULB ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. BSB BSB: Bless the LORD, all His angels mighty in strength who carry out His word, who hearken to the voice of His command.
21 ULB ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. BSB BSB: Bless the LORD, all His hosts, you servants who do His will.
22 ULB ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು. BSB BSB: Bless the LORD, all His works in all places of His dominion. Bless the LORD, O my soul!
Select verses for actions: Enter goes to them and Escape comes back.