1 ULB ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. BSB BSB: Give thanks to the LORD, call upon His name; make known His deeds among the nations.
2 ULB ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. BSB BSB: Sing to Him, sing praises to Him; tell of all His wonders.
3 ULB ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. BSB BSB: Glory in His holy name; let the hearts of those who seek the LORD rejoice.
4 ULB ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. BSB BSB: Seek out the LORD and His strength; seek His face always.
5 ULB ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, BSB BSB: Remember the wonders He has done, His marvels, and the judgments He has pronounced,
6 ULB ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. BSB BSB: O offspring of His servant Abraham, O sons of Jacob, His chosen ones.
7 ULB ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. BSB BSB: He is the LORD our God; His judgments carry throughout the earth.
8 ULB ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. BSB BSB: He remembers His covenant forever, the word He ordained for a thousand generations—
9 ULB ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. BSB BSB: the covenant He made with Abraham, and the oath He swore to Isaac.
10 ULB ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. BSB BSB: He confirmed it to Jacob as a decree, to Israel as an everlasting covenant:
11 ULB ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ, BSB BSB: “I will give you the land of Canaan as the portion of your inheritance.”
12 ULB ಆತನು, <<ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು>> ಎಂದು ಹೇಳಿದನು. BSB BSB: When they were few in number, few indeed, and strangers in the land,
13 ULB ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ, BSB BSB: they wandered from nation to nation, from one kingdom to another.
14 ULB ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ, BSB BSB: He let no man oppress them; He rebuked kings on their behalf:
15 ULB <<ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು>> ಎಂದು ಹೇಳಿದನು. BSB BSB: “Do not touch My anointed ones! Do no harm to My prophets!”
16 ULB ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು. BSB BSB: He called down famine on the land and cut off all their supplies of food.
17 ULB ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. BSB BSB: He sent a man before them—Joseph, sold as a slave.
18 ULB ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು. BSB BSB: They bruised his feet with shackles and placed his neck in irons,
19 ULB ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು. BSB BSB: until his prediction came true and the word of the LORD proved him right.
20 ULB ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು. BSB BSB: The king sent and released him; the ruler of peoples set him free.
21 ULB ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. BSB BSB: He made him master of his household, ruler over all his substance,
22 ULB ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು. BSB BSB: to instruct his princes as he pleased and teach his elders wisdom.
23 ULB ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು. BSB BSB: Then Israel entered Egypt; Jacob dwelt in the land of Ham.
24 ULB ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. BSB BSB: And the LORD made His people very fruitful, more numerous than their foes,
25 ULB ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. BSB BSB: whose hearts He turned to hate His people, to conspire against His servants.
26 ULB ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. BSB BSB: He sent Moses His servant, and Aaron, whom He had chosen.
27 ULB ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು. BSB BSB: They performed His miraculous signs among them, and wonders in the land of Ham.
28 ULB ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ. BSB BSB: He sent darkness, and it became dark—yet they defied His words.
29 ULB ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು. BSB BSB: He turned their waters to blood and caused their fish to die.
30 ULB ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು. BSB BSB: Their land teemed with frogs, even in their royal chambers.
31 ULB ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು. BSB BSB: He spoke, and insects swarmed—gnats throughout their country.
32 ULB ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ, BSB BSB: He gave them hail for rain, with lightning throughout their land.
33 ULB ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು. BSB BSB: He struck their vines and fig trees and shattered the trees of their country.
34 ULB ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು, BSB BSB: He spoke, and the locusts came—young locusts without number.
35 ULB ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು. BSB BSB: They devoured every plant in their land and consumed the produce of their soil.
36 ULB ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು. BSB BSB: Then He struck all the firstborn in their land, the firstfruits of all their vigor.
37 ULB ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. BSB BSB: He brought Israel out with silver and gold, and none among His tribes stumbled.
38 ULB ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು. BSB BSB: Egypt was glad when they departed, for the dread of Israel had fallen on them.
39 ULB ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು. BSB BSB: He spread a cloud as a covering and a fire to light up the night.
40 ULB ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು. BSB BSB: They asked, and He brought quail and satisfied them with the bread of heaven.
41 ULB ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು. BSB BSB: He opened a rock, and water gushed out; it flowed like a river in the desert.
42 ULB ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು BSB BSB: For He remembered His holy promise to Abraham His servant.
43 ULB ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. BSB BSB: He brought forth His people with rejoicing, His chosen with shouts of joy.
44 ULB ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು. BSB BSB: He gave them the lands of the nations, that they might inherit the fruit of others’ labor,
45 ULB ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ! BSB BSB: that they might keep His statutes and obey His laws. Hallelujah!
Select verses for actions: Enter goes to them and Escape comes back.