1 ULB ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. BSB BSB: Hallelujah! Give thanks to the LORD, for He is good; His loving devotion endures forever.
2 ULB ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು? BSB BSB: Who can describe the mighty acts of the LORD or fully proclaim His praise?
3 ULB ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು. BSB BSB: Blessed are those who uphold justice, who practice righteousness at all times.
4 ULB ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ, BSB BSB: Remember me, O LORD, in Your favor to Your people; visit me with Your salvation,
5 ULB ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು. BSB BSB: that I may see the prosperity of Your chosen ones, and rejoice in the gladness of Your nation, and give glory with Your inheritance.
6 ULB ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು. BSB BSB: We have sinned like our fathers; we have done wrong and acted wickedly.
7 ULB ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು. BSB BSB: Our fathers in Egypt did not grasp Your wonders or remember Your abundant kindness; but they rebelled by the sea, there at the Red Sea.
8 ULB ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು. BSB BSB: Yet He saved them for the sake of His name, to make His power known.
9 ULB ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು. BSB BSB: He rebuked the Red Sea, and it dried up; He led them through the depths as through a desert.
10 ULB ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು. BSB BSB: He saved them from the hand that hated them; He redeemed them from the hand of the enemy.
11 ULB ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ. BSB BSB: The waters covered their foes; not one of them remained.
12 ULB ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು. BSB BSB: Then they believed His promises and sang His praise.
13 ULB ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ, BSB BSB: Yet they soon forgot His works and failed to wait for His counsel.
14 ULB ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. BSB BSB: They craved intensely in the wilderness and tested God in the desert.
15 ULB ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. BSB BSB: So He granted their request, but sent a wasting disease upon them.
16 ULB ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು, BSB BSB: In the camp they envied Moses, as well as Aaron, the holy one of the LORD.
17 ULB ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು. BSB BSB: The earth opened up and swallowed Dathan; it covered the assembly of Abiram.
18 ULB ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು. BSB BSB: Then fire blazed through their company; flames consumed the wicked.
19 ULB ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು. BSB BSB: At Horeb they made a calf and worshiped a molten image.
20 ULB ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು. BSB BSB: They exchanged their Glory for the image of a grass-eating ox.
21 ULB ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ, BSB BSB: They forgot God their Savior, who did great things in Egypt,
22 ULB ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು. BSB BSB: wondrous works in the land of Ham, and awesome deeds by the Red Sea.
23 ULB ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. BSB BSB: So He said He would destroy them—had not Moses His chosen one stood before Him in the breach to divert His wrath from destroying them.
24 ULB ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ. BSB BSB: They despised the pleasant land; they did not believe His promise.
25 ULB ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. BSB BSB: They grumbled in their tents and did not listen to the voice of the LORD.
26 ULB ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ, BSB BSB: So He raised His hand and swore to cast them down in the wilderness,
27 ULB ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. BSB BSB: to disperse their offspring among the nations and scatter them throughout the lands.
28 ULB ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು. BSB BSB: They yoked themselves to Baal of Peor and ate sacrifices offered to lifeless gods.
29 ULB ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು. BSB BSB: So they provoked the LORD to anger with their deeds, and a plague broke out among them.
30 ULB ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು. BSB BSB: But Phinehas stood and intervened, and the plague was restrained.
31 ULB ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. BSB BSB: It was credited to him as righteousness for endless generations to come.
32 ULB ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು. BSB BSB: At the waters of Meribah they angered the LORD, and trouble came to Moses because of them.
33 ULB ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು. BSB BSB: For they rebelled against His Spirit, and Moses spoke rashly with his lips.
34 ULB ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ, BSB BSB: They did not destroy the peoples as the LORD had commanded them,
35 ULB ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು. BSB BSB: but they mingled with the nations and adopted their customs.
36 ULB ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. BSB BSB: They worshiped their idols, which became a snare to them.
37 ULB ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. BSB BSB: They sacrificed their sons and their daughters to demons.
38 ULB ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು. BSB BSB: They shed innocent blood—the blood of their sons and daughters, whom they sacrificed to the idols of Canaan, and the land was polluted with blood.
39 ULB ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು. BSB BSB: They defiled themselves by their actions and prostituted themselves by their deeds.
40 ULB ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ, BSB BSB: So the anger of the LORD burned against His people, and He abhorred His own inheritance.
41 ULB ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು; BSB BSB: He delivered them into the hand of the nations, and those who hated them ruled over them.
42 ULB ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು. BSB BSB: Their enemies oppressed them and subdued them under their hand.
43 ULB ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. BSB BSB: Many times He rescued them, but they were bent on rebellion and sank down in their iniquity.
44 ULB ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. BSB BSB: Nevertheless He heard their cry; He took note of their distress.
45 ULB ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು. BSB BSB: And He remembered His covenant with them, and relented by the abundance of His loving devotion.
46 ULB ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು. BSB BSB: He made them objects of compassion to all who held them captive.
47 ULB ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು. BSB BSB: Save us, O LORD our God, and gather us from the nations, that we may give thanks to Your holy name, that we may glory in Your praise.
48 ULB ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ <<ಆಮೆನ್>> ಎನ್ನಲಿ. ಯೆಹೋವನಿಗೆ ಸ್ತೋತ್ರ! BSB BSB: Blessed be the LORD, the God of Israel, from everlasting to everlasting. Let all the people say, “Amen!” Hallelujah!
Select verses for actions: Enter goes to them and Escape comes back.