Psalm 111 111 Psalms Book 5 Kannada Unlocked Literal Bible 1 ULB ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. BSB BSB: Hallelujah! I will give thanks to the LORD with all my heart in the council of the upright and in the assembly.
2 ULB ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. BSB BSB: Great are the works of the LORD; they are pondered by all who delight in them.
3 ULB ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. BSB BSB: Splendid and majestic is His work; His righteousness endures forever.
4 ULB ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. BSB BSB: He has caused His wonders to be remembered; the LORD is gracious and compassionate.
5 ULB ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ BSB BSB: He provides food for those who fear Him; He remembers His covenant forever.
6 ULB ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. BSB BSB: He has shown His people the power of His works by giving them the inheritance of the nations.
7 ULB ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. BSB BSB: The works of His hands are truth and justice; all His precepts are trustworthy.
8 ULB ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. BSB BSB: They are upheld forever and ever, enacted in truth and uprightness.
9 ULB ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. BSB BSB: He has sent redemption to His people; He has ordained His covenant forever; holy and awesome is His name.
10 ULB ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು. BSB BSB: The fear of the LORD is the beginning of wisdom; all who follow His precepts gain rich understanding. His praise endures forever!
Select verses for actions: Enter goes to them and Escape comes back.
Chapter complete
You’ve read Psalm 111
Make Opened yours A free account keeps your place, highlights and notes on every device. Add Plus to ask Study Help about Psalm 111, and keep Opened free for readers who can’t pay.