1 ULB ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು. BSB BSB: Blessed are those whose way is blameless, who walk in the Law of the LORD.
2 ULB ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು. BSB BSB: Blessed are those who keep His testimonies and seek Him with all their heart.
3 ULB ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ. BSB BSB: They do no iniquity; they walk in His ways.
4 ULB ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ. BSB BSB: You have ordained Your precepts, that we should keep them diligently.
5 ULB ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು! BSB BSB: Oh, that my ways were committed to keeping Your statutes!
6 ULB ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ. BSB BSB: Then I would not be ashamed when I consider all Your commandments.
7 ULB ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು. BSB BSB: I will praise You with an upright heart when I learn Your righteous judgments.
8 ULB ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ. BSB BSB: I will keep Your statutes; do not utterly forsake me.
9 ULB ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ. BSB BSB: How can a young man keep his way pure? By guarding it according to Your word.
10 ULB ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು. BSB BSB: With all my heart I have sought You; do not let me stray from Your commandments.
11 ULB ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. BSB BSB: I have hidden Your word in my heart that I might not sin against You.
12 ULB ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. BSB BSB: Blessed are You, O LORD; teach me Your statutes.
13 ULB ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ. BSB BSB: With my lips I proclaim all the judgments of Your mouth.
14 ULB ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ. BSB BSB: I rejoice in the way of Your testimonies as much as in all riches.
15 ULB ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು. BSB BSB: I will meditate on Your precepts and regard Your ways.
16 ULB ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. BSB BSB: I will delight in Your statutes; I will not forget Your word.
17 ULB ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು. BSB BSB: Deal bountifully with Your servant, that I may live and keep Your word.
18 ULB ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. BSB BSB: Open my eyes that I may see wondrous things from Your law.
19 ULB ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. BSB BSB: I am a stranger on the earth; do not hide Your commandments from me.
20 ULB ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ. BSB BSB: My soul is consumed with longing for Your judgments at all times.
21 ULB ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು. BSB BSB: You rebuke the arrogant—the cursed who stray from Your commandments.
22 ULB ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು. BSB BSB: Remove my scorn and contempt, for I have kept Your testimonies.
23 ULB ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. BSB BSB: Though rulers sit and slander me, Your servant meditates on Your statutes.
24 ULB ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. BSB BSB: Your testimonies are indeed my delight; they are my counselors.
25 ULB ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. BSB BSB: My soul cleaves to the dust; revive me according to Your word.
26 ULB ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿದಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. BSB BSB: I recounted my ways, and You answered me; teach me Your statutes.
27 ULB ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು. BSB BSB: Make clear to me the way of Your precepts; then I will meditate on Your wonders.
28 ULB ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು. BSB BSB: My soul melts with sorrow; strengthen me according to Your word.
29 ULB ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು. BSB BSB: Remove me from the path of deceit and graciously grant me Your law.
30 ULB ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ. BSB BSB: I have chosen the way of truth; I have set Your ordinances before me.
31 ULB ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ. BSB BSB: I cling to Your testimonies, O LORD; let me not be put to shame.
32 ULB ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. BSB BSB: I run in the path of Your commandments, for You will enlarge my heart.
33 ULB ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು. BSB BSB: Teach me, O LORD, the way of Your statutes, and I will keep them to the end.
34 ULB ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. BSB BSB: Give me understanding that I may obey Your law, and follow it with all my heart.
35 ULB ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ. BSB BSB: Direct me in the path of Your commandments, for there I find delight.
36 ULB ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು. BSB BSB: Turn my heart to Your testimonies and not to covetous gain.
37 ULB ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು. BSB BSB: Turn my eyes away from worthless things; revive me with Your word.
38 ULB ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು. BSB BSB: Establish Your word to Your servant, to produce reverence for You.
39 ULB ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ. BSB BSB: Turn away the disgrace I dread, for Your judgments are good.
40 ULB ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. BSB BSB: How I long for Your precepts! Revive me in Your righteousness.
41 ULB ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ. BSB BSB: May Your loving devotion come to me, O LORD, Your salvation, according to Your promise.
42 ULB ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ. BSB BSB: Then I can answer him who taunts, for I trust in Your word.
43 ULB ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ. BSB BSB: Never take Your word of truth from my mouth, for I hope in Your judgments.
44 ULB ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. BSB BSB: I will always obey Your law, forever and ever.
45 ULB ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು. BSB BSB: And I will walk in freedom, for I have sought Your precepts.
46 ULB ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ. BSB BSB: I will speak of Your testimonies before kings, and I will not be ashamed.
47 ULB ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ. BSB BSB: I delight in Your commandments because I love them.
48 ULB ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ. BSB BSB: I lift up my hands to Your commandments, which I love, and I meditate on Your statutes.
49 ULB ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ! BSB BSB: Remember Your word to Your servant, upon which You have given me hope.
50 ULB ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ. BSB BSB: This is my comfort in affliction, that Your promise has given me life.
51 ULB ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ. BSB BSB: The arrogant utterly deride me, but I do not turn from Your law.
52 ULB ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತೈಸಿಕೊಂಡಿದ್ದೇನೆ. BSB BSB: I remember Your judgments of old, O LORD, and in them I find comfort.
53 ULB ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. BSB BSB: Rage has taken hold of me because of the wicked who reject Your law.
54 ULB ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು. BSB BSB: Your statutes are songs to me in the house of my pilgrimage.
55 ULB ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ. BSB BSB: In the night, O LORD, I remember Your name, that I may keep Your law.
56 ULB ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. BSB BSB: This is my practice, for I obey Your precepts.
57 ULB ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ. BSB BSB: The LORD is my portion; I have promised to keep Your words.
58 ULB ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು. BSB BSB: I have sought Your face with all my heart; be gracious to me according to Your promise.
59 ULB ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ. BSB BSB: I considered my ways and turned my steps to Your testimonies.
60 ULB ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ. BSB BSB: I hurried without hesitating to keep Your commandments.
61 ULB ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. BSB BSB: Though the ropes of the wicked bind me, I do not forget Your law.
62 ULB ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು. BSB BSB: At midnight I rise to give You thanks for Your righteous judgments.
63 ULB ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. BSB BSB: I am a friend to all who fear You, and to those who keep Your precepts.
64 ULB ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. BSB BSB: The earth is filled with Your loving devotion, O LORD; teach me Your statutes.
65 ULB ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ. BSB BSB: You are good to Your servant, O LORD, according to Your word.
66 ULB ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. BSB BSB: Teach me good judgment and knowledge, for I believe in Your commandments.
67 ULB ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ. BSB BSB: Before I was afflicted, I went astray; but now I keep Your word.
68 ULB ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. BSB BSB: You are good, and You do what is good; teach me Your statutes.
69 ULB ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು. BSB BSB: Though the arrogant have smeared me with lies, I keep Your precepts with all my heart.
70 ULB ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ. BSB BSB: Their hearts are callous and insensitive, but I delight in Your law.
71 ULB ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು. BSB BSB: It was good for me to be afflicted, that I might learn Your statutes.
72 ULB ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. BSB BSB: The law from Your mouth is more precious to me than thousands of pieces of gold and silver.
73 ULB ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು. BSB BSB: Your hands have made me and fashioned me; give me understanding to learn Your commandments.
74 ULB ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ. BSB BSB: May those who fear You see me and rejoice, for I have hoped in Your word.
75 ULB ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ. BSB BSB: I know, O LORD, that Your judgments are righteous, and that in faithfulness You have afflicted me.
76 ULB ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. BSB BSB: May Your loving devotion comfort me, I pray, according to Your promise to Your servant.
77 ULB ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. BSB BSB: May Your compassion come to me, that I may live, for Your law is my delight.
78 ULB ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು. BSB BSB: May the arrogant be put to shame for subverting me with a lie; I will meditate on Your precepts.
79 ULB ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ. BSB BSB: May those who fear You turn to me, those who know Your testimonies.
80 ULB ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. BSB BSB: May my heart be blameless in Your statutes, that I may not be put to shame.
81 ULB ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ. BSB BSB: My soul faints for Your salvation; I wait for Your word.
82 ULB ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು. BSB BSB: My eyes fail, looking for Your promise; I ask, “When will You comfort me?”
83 ULB ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ. BSB BSB: Though I am like a wineskin dried up by smoke, I do not forget Your statutes.
84 ULB ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ? BSB BSB: How many days must Your servant wait? When will You execute judgment on my persecutors?
85 ULB ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ. BSB BSB: The arrogant have dug pits for me in violation of Your law.
86 ULB ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು. BSB BSB: All Your commandments are faithful; I am persecuted without cause—help me!
87 ULB ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ. BSB BSB: They almost wiped me from the earth, but I have not forsaken Your precepts.
88 ULB ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. BSB BSB: Revive me according to Your loving devotion, that I may obey the testimony of Your mouth.
89 ULB ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. BSB BSB: Your word, O LORD, is everlasting; it is firmly fixed in the heavens.
90 ULB ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ. BSB BSB: Your faithfulness continues through all generations; You established the earth, and it endures.
91 ULB ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. BSB BSB: Your ordinances stand to this day, for all things are servants to You.
92 ULB ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. BSB BSB: If Your law had not been my delight, then I would have perished in my affliction.
93 ULB ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ. BSB BSB: I will never forget Your precepts, for by them You have revived me.
94 ULB ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ. BSB BSB: I am Yours; save me, for I have sought Your precepts.
95 ULB ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು. BSB BSB: The wicked wait to destroy me, but I will ponder Your testimonies.
96 ULB ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. BSB BSB: I have seen a limit to all perfection, but Your commandment is without limit.
97 ULB ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ. BSB BSB: Oh, how I love Your law! All day long it is my meditation.
98 ULB ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ. BSB BSB: Your commandments make me wiser than my enemies, for they are always with me.
99 ULB ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. BSB BSB: I have more insight than all my teachers, for Your testimonies are my meditation.
100 ULB ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. BSB BSB: I discern more than the elders, for I obey Your precepts.
101 ULB ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ. BSB BSB: I have kept my feet from every evil path, that I may keep Your word.
102 ULB ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ. BSB BSB: I have not departed from Your ordinances, for You Yourself have taught me.
103 ULB ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ. BSB BSB: How sweet are Your words to my taste—sweeter than honey in my mouth!
104 ULB ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. BSB BSB: I gain understanding from Your precepts; therefore I hate every false way.
105 ULB ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ. BSB BSB: Your word is a lamp to my feet and a light to my path.
106 ULB ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು. BSB BSB: I have sworn and confirmed that I will keep Your righteous judgments.
107 ULB ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. BSB BSB: I am severely afflicted, O LORD; revive me through Your word.
108 ULB ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು. BSB BSB: Accept the freewill offerings of my mouth, O LORD, and teach me Your judgments.
109 ULB ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ. BSB BSB: I constantly take my life in my hands, yet I do not forget Your law.
110 ULB ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ. BSB BSB: The wicked have set a snare for me, but I have not strayed from Your precepts.
111 ULB ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ. BSB BSB: Your testimonies are my heritage forever, for they are the joy of my heart.
112 ULB ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. BSB BSB: I have inclined my heart to perform Your statutes, even to the very end.
113 ULB ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. BSB BSB: The double-minded I despise, but Your law I love.
114 ULB ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ. BSB BSB: You are my hiding place and my shield; I put my hope in Your word.
115 ULB ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು. BSB BSB: Depart from me, you evildoers, that I may obey the commandments of my God.
116 ULB ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ. BSB BSB: Sustain me as You promised, that I may live; let me not be ashamed of my hope.
117 ULB ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು. BSB BSB: Uphold me, and I will be saved, that I may always regard Your statutes.
118 ULB ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ. BSB BSB: You reject all who stray from Your statutes, for their deceitfulness is in vain.
119 ULB ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ. BSB BSB: All the wicked on earth You discard like dross; therefore I love Your testimonies.
120 ULB ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. BSB BSB: My flesh trembles in awe of You; I stand in fear of Your judgments.
121 ULB ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ. BSB BSB: I have done what is just and right; do not leave me to my oppressors.
122 ULB ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ. BSB BSB: Ensure Your servant’s well-being; do not let the arrogant oppress me.
123 ULB ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು. BSB BSB: My eyes fail, looking for Your salvation, and for Your righteous promise.
124 ULB ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. BSB BSB: Deal with Your servant according to Your loving devotion, and teach me Your statutes.
125 ULB ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು. BSB BSB: I am Your servant; give me understanding, that I may know Your testimonies.
126 ULB ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. BSB BSB: It is time for the LORD to act, for they have broken Your law.
127 ULB ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. BSB BSB: Therefore I love Your commandments more than gold, even the purest gold.
128 ULB ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. BSB BSB: Therefore I admire all Your precepts and hate every false way.
129 ULB ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ. BSB BSB: Wonderful are Your testimonies; therefore I obey them.
130 ULB ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. BSB BSB: The unfolding of Your words gives light; it informs the simple.
131 ULB ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ. BSB BSB: I open my mouth and pant, longing for Your commandments.
132 ULB ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ? BSB BSB: Turn to me and show me mercy, as You do to those who love Your name.
133 ULB ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು. BSB BSB: Order my steps in Your word; let no sin rule over me.
134 ULB ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು. BSB BSB: Redeem me from the oppression of man, that I may keep Your precepts.
135 ULB ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. BSB BSB: Make Your face shine upon Your servant, and teach me Your statutes.
136 ULB ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. BSB BSB: My eyes shed streams of tears because Your law is not obeyed.
137 ULB ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ. BSB BSB: Righteous are You, O LORD, and upright are Your judgments.
138 ULB ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ, BSB BSB: The testimonies You have laid down are righteous and altogether faithful.
139 ULB ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, BSB BSB: My zeal has consumed me because my foes forget Your words.
140 ULB ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ. BSB BSB: Your promise is completely pure; therefore Your servant loves it.
141 ULB ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ. BSB BSB: I am lowly and despised, but I do not forget Your precepts.
142 ULB ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ. BSB BSB: Your righteousness is everlasting and Your law is true.
143 ULB ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ. BSB BSB: Trouble and distress have found me, but Your commandments are my delight.
144 ULB ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. BSB BSB: Your testimonies are righteous forever. Give me understanding, that I may live.
145 ULB ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. BSB BSB: I call with all my heart; answer me, O LORD! I will obey Your statutes.
146 ULB ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು. BSB BSB: I call to You; save me, that I may keep Your testimonies.
147 ULB ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ. BSB BSB: I rise before dawn and cry for help; in Your word I have put my hope.
148 ULB ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ. BSB BSB: My eyes anticipate the watches of night, that I may meditate on Your word.
149 ULB ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. BSB BSB: Hear my voice, O LORD, according to Your loving devotion; give me life according to Your justice.
150 ULB ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ. BSB BSB: Those who follow after wickedness draw near; they are far from Your law.
151 ULB ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ. BSB BSB: You are near, O LORD, and all Your commandments are true.
152 ULB ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. BSB BSB: Long ago I learned from Your testimonies that You have established them forever.
153 ULB ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. BSB BSB: Look upon my affliction and rescue me, for I have not forgotten Your law.
154 ULB ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. BSB BSB: Defend my cause and redeem me; revive me according to Your word.
155 ULB ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. BSB BSB: Salvation is far from the wicked because they do not seek Your statutes.
156 ULB ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು. BSB BSB: Great are Your mercies, O LORD; revive me according to Your ordinances.
157 ULB ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ. BSB BSB: Though my persecutors and foes are many, I have not turned from Your testimonies.
158 ULB ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ. BSB BSB: I look on the faithless with loathing because they do not keep Your word.
159 ULB ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. BSB BSB: Consider how I love Your precepts, O LORD; give me life according to Your loving devotion.
160 ULB ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. BSB BSB: The entirety of Your word is truth, and all Your righteous judgments endure forever.
161 ULB ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ. BSB BSB: Rulers persecute me without cause, but my heart fears only Your word.
162 ULB ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. BSB BSB: I rejoice in Your promise like one who finds great spoil.
163 ULB ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ. BSB BSB: I hate and abhor falsehood, but Your law I love.
164 ULB ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ. BSB BSB: Seven times a day I praise You for Your righteous judgments.
165 ULB ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ. BSB BSB: Abundant peace belongs to those who love Your law; nothing can make them stumble.
166 ULB ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ. BSB BSB: I wait for Your salvation, O LORD, and I carry out Your commandments.
167 ULB ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ. BSB BSB: I obey Your testimonies and love them greatly.
168 ULB ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. BSB BSB: I obey Your precepts and Your testimonies, for all my ways are before You.
169 ULB ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು. BSB BSB: May my cry come before You, O LORD; give me understanding according to Your word.
170 ULB ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು. BSB BSB: May my plea come before You; rescue me according to Your promise.
171 ULB ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ, BSB BSB: My lips pour forth praise, for You teach me Your statutes.
172 ULB ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು. BSB BSB: My tongue sings of Your word, for all Your commandments are righteous.
173 ULB ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ. BSB BSB: May Your hand be ready to help me, for I have chosen Your precepts.
174 ULB ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು. BSB BSB: I long for Your salvation, O LORD, and Your law is my delight.
175 ULB ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ. BSB BSB: Let me live to praise You; may Your judgments sustain me.
176 ULB ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ. BSB BSB: I have strayed like a lost sheep; seek Your servant, for I have not forgotten Your commandments.
Select verses for actions: Enter goes to them and Escape comes back.