1 ULB ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, BSB BSB: Hallelujah! Praise the name of the LORD. Give praise, O servants of the LORD,
2 ULB ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. BSB BSB: who stand in the house of the LORD, in the courts of the house of our God.
3 ULB ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು. BSB BSB: Hallelujah, for the LORD is good; sing praises to His name, for it is lovely.
4 ULB ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. BSB BSB: For the LORD has chosen Jacob as His own, Israel as His treasured possession.
5 ULB ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. BSB BSB: For I know that the LORD is great; our Lord is above all gods.
6 ULB ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. BSB BSB: The LORD does all that pleases Him in the heavens and on the earth, in the seas and in all their depths.
7 ULB ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. BSB BSB: He causes the clouds to rise from the ends of the earth. He generates the lightning with the rain and brings forth the wind from His storehouses.
8 ULB ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. BSB BSB: He struck down the firstborn of Egypt, of both man and beast.
9 ULB ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. BSB BSB: He sent signs and wonders into your midst, O Egypt, against Pharaoh and all his servants.
10 ULB ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. BSB BSB: He struck down many nations and slaughtered mighty kings:
11 ULB ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. BSB BSB: Sihon king of the Amorites, Og king of Bashan, and all the kings of Canaan.
12 ULB ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು. BSB BSB: He gave their land as an inheritance, as a heritage to His people Israel.
13 ULB ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. BSB BSB: Your name, O LORD, endures forever, Your renown, O LORD, through all generations.
14 ULB ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. BSB BSB: For the LORD will vindicate His people and will have compassion on His servants.
15 ULB ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. BSB BSB: The idols of the nations are silver and gold, made by the hands of men.
16 ULB ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, BSB BSB: They have mouths, but cannot speak; they have eyes, but cannot see;
17 ULB ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. BSB BSB: they have ears, but cannot hear; nor is there breath in their mouths.
18 ULB ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. BSB BSB: Those who make them become like them, as do all who trust in them.
19 ULB ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. BSB BSB: O house of Israel, bless the LORD; O house of Aaron, bless the LORD;
20 ULB ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ. BSB BSB: O house of Levi, bless the LORD; you who fear the LORD, bless the LORD!
21 ULB ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ! BSB BSB: Blessed be the LORD from Zion—He who dwells in Jerusalem. Hallelujah!
Select verses for actions: Enter goes to them and Escape comes back.