2 ULB ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ. BSB BSB: You know when I sit and when I rise; You understand my thoughts from afar.
3 ULB ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. BSB BSB: You search out my path and my lying down; You are aware of all my ways.
4 ULB ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ. BSB BSB: Even before a word is on my tongue, You know all about it, O LORD.
5 ULB ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ. BSB BSB: You hem me in behind and before; You have laid Your hand upon me.
6 ULB ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ. BSB BSB: Such knowledge is too wonderful for me, too lofty for me to attain.
8 ULB ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. BSB BSB: If I ascend to the heavens, You are there; if I make my bed in Sheol, You are there.
9 ULB ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, BSB BSB: If I rise on the wings of the dawn, if I settle by the farthest sea,
10 ULB ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು. BSB BSB: even there Your hand will guide me; Your right hand will hold me fast.
11 ULB ಕಾರ್ಗತ್ತಲೆಯು ನನ್ನನ್ನು ಕವಿಯುವುದು, <<ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು>> ಎಂದು ಹೇಳಿಕೊಂಡರೇನು? BSB BSB: If I say, “Surely the darkness will hide me, and the light become night around me”—
12 ULB ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. BSB BSB: even the darkness is not dark to You, but the night shines like the day, for darkness is as light to You.
14 ULB ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ. BSB BSB: I praise You, for I am fearfully and wonderfully made. Marvelous are Your works, and I know this very well.
15 ULB ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ. BSB BSB: My frame was not hidden from You when I was made in secret, when I was woven together in the depths of the earth.
16 ULB ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. BSB BSB: Your eyes saw my unformed body; all my days were written in Your book and ordained for me before one of them came to be.
17 ULB ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ. BSB BSB: How precious to me are Your thoughts, O God, how vast is their sum!
18 ULB ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ. BSB BSB: If I were to count them, they would outnumber the grains of sand; and when I awake, I am still with You.
19 ULB ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ. BSB BSB: O God, that You would slay the wicked—away from me, you bloodthirsty men—
20 ULB ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ. BSB BSB: who speak of You deceitfully; Your enemies take Your name in vain.
21 ULB ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ? BSB BSB: Do I not hate those who hate You, O LORD, and detest those who rise against You?
22 ULB ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ. BSB BSB: I hate them with perfect hatred; I count them as my enemies.
23 ULB ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ. BSB BSB: Search me, O God, and know my heart; test me and know my concerns.
24 ULB ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು. BSB BSB: See if there is any offensive way in me; lead me in the way everlasting.
Select verses for actions: Enter goes to them and Escape comes back.