1 ULB ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. BSB BSB: A Psalm of David. O LORD, hear my prayer. In Your faithfulness, give ear to my plea; in Your righteousness, answer me.
2 ULB ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. BSB BSB: Do not bring Your servant into judgment, for no one alive is righteous before You.
3 ULB ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ. BSB BSB: For the enemy has pursued my soul, crushing my life to the ground, making me dwell in darkness like those long since dead.
4 ULB ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ. BSB BSB: My spirit grows faint within me; my heart is dismayed inside me.
5 ULB ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; BSB BSB: I remember the days of old; I meditate on all Your works; I consider the work of Your hands.
6 ULB ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ BSB BSB: I stretch out my hands to You; my soul thirsts for You like a parched land. Selah
7 ULB ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. BSB BSB: Answer me quickly, O LORD; my spirit fails. Do not hide Your face from me, or I will be like those who descend to the Pit.
8 ULB ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. BSB BSB: Let me hear Your loving devotion in the morning, for I have put my trust in You. Teach me the way I should walk, for to You I lift up my soul.
9 ULB ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು. BSB BSB: Deliver me from my enemies, O LORD; I flee to You for refuge.
10 ULB ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. BSB BSB: Teach me to do Your will, for You are my God. May Your good Spirit lead me on level ground.
11 ULB ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. BSB BSB: For the sake of Your name, O LORD, revive me. In Your righteousness, bring my soul out of trouble.
12 ULB ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ. BSB BSB: And in Your loving devotion, cut off my enemies. Destroy all who afflict me, for I am Your servant.
Select verses for actions: Enter goes to them and Escape comes back.