1 ULB ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ. BSB BSB: Of David. Blessed be the LORD, my Rock, who trains my hands for war, my fingers for battle.
2 ULB ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ. BSB BSB: He is my steadfast love and my fortress, my stronghold and my deliverer. He is my shield, in whom I take refuge, who subdues peoples under me.
3 ULB ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? BSB BSB: O LORD, what is man, that You regard him, the son of man that You think of him?
4 ULB ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ. BSB BSB: Man is like a breath; his days are like a passing shadow.
5 ULB ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು. BSB BSB: Part Your heavens, O LORD, and come down; touch the mountains, that they may smoke.
6 ULB ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು. BSB BSB: Flash forth Your lightning and scatter them; shoot Your arrows and rout them.
7 ULB ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ. BSB BSB: Reach down from on high; set me free and rescue me from the deep waters, from the grasp of foreigners,
8 ULB ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು. BSB BSB: whose mouths speak falsehood, whose right hands are deceitful.
9 ULB ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. BSB BSB: I will sing to You a new song, O God; on a harp of ten strings I will make music to You—
10 ULB ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ. BSB BSB: to Him who gives victory to kings, who frees His servant David from the deadly sword.
11 ULB ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು. BSB BSB: Set me free and rescue me from the grasp of foreigners, whose mouths speak falsehood, whose right hands are deceitful.
12 ULB ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು. BSB BSB: Then our sons will be like plants nurtured in their youth, our daughters like corner pillars carved to adorn a palace.
13 ULB ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು. BSB BSB: Our storehouses will be full, supplying all manner of produce; our flocks will bring forth thousands, tens of thousands in our fields.
14 ULB ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ. BSB BSB: Our oxen will bear great loads. There will be no breach in the walls, no going into captivity, and no cry of lament in our streets.
15 ULB ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು. BSB BSB: Blessed are the people of whom this is so; blessed are the people whose God is the LORD.
Select verses for actions: Enter goes to them and Escape comes back.