1 ULB ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. BSB BSB: A Psalm of praise. Of David. I will exalt You, my God and King; I will bless Your name forever and ever.
2 ULB ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು. BSB BSB: Every day I will bless You, and I will praise Your name forever and ever.
3 ULB ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು. BSB BSB: Great is the LORD and greatly to be praised; His greatness is unsearchable.
4 ULB ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. BSB BSB: One generation will commend Your works to the next, and will proclaim Your mighty acts—
5 ULB ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. BSB BSB: the glorious splendor of Your majesty. And I will meditate on Your wondrous works.
6 ULB ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. BSB BSB: They will proclaim the power of Your awesome deeds, and I will declare Your greatness.
7 ULB ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು. BSB BSB: They will extol the fame of Your abundant goodness and sing joyfully of Your righteousness.
8 ULB ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. BSB BSB: The LORD is gracious and compassionate, slow to anger and abounding in loving devotion.
9 ULB ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. BSB BSB: The LORD is good to all; His compassion rests on all He has made.
10 ULB ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. BSB BSB: All You have made will give You thanks, O LORD, and Your saints will bless You.
11 ULB ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. BSB BSB: They will tell of the glory of Your kingdom and speak of Your might,
12 ULB ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. BSB BSB: to make known to men Your mighty acts and the glorious splendor of Your kingdom.
13 ULB ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು. BSB BSB: Your kingdom is an everlasting kingdom, and Your dominion endures through all generations. The LORD is faithful in all His words and kind in all His actions.
14 ULB ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. BSB BSB: The LORD upholds all who fall and lifts up all who are bowed down.
15 ULB ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. BSB BSB: The eyes of all look to You, and You give them their food in season.
16 ULB ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. BSB BSB: You open Your hand and satisfy the desire of every living thing.
17 ULB ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. BSB BSB: The LORD is righteous in all His ways and kind in all His deeds.
18 ULB ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. BSB BSB: The LORD is near to all who call on Him, to all who call out to Him in truth.
19 ULB ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ. BSB BSB: He fulfills the desires of those who fear Him; He hears their cry and saves them.
20 ULB ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. BSB BSB: The LORD preserves all who love Him, but all the wicked He will destroy.
21 ULB ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ. BSB BSB: My mouth will declare the praise of the LORD; let every creature bless His holy name forever and ever.
Select verses for actions: Enter goes to them and Escape comes back.