1 ULB ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. BSB BSB: Hallelujah! Praise the LORD, O my soul.
2 ULB ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. BSB BSB: I will praise the LORD all my life; I will sing praises to my God while I have my being.
3 ULB ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ, BSB BSB: Put not your trust in princes, in mortal man, who cannot save.
4 ULB ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. BSB BSB: When his spirit departs, he returns to the ground; on that very day his plans perish.
5 ULB ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. BSB BSB: Blessed is he whose help is the God of Jacob, whose hope is in the LORD his God,
6 ULB ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, BSB BSB: the Maker of heaven and earth, the sea, and everything in them. He remains faithful forever.
7 ULB ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. BSB BSB: He executes justice for the oppressed and gives food to the hungry. The LORD sets the prisoners free,
8 ULB ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. BSB BSB: the LORD opens the eyes of the blind, the LORD lifts those who are weighed down, the LORD loves the righteous.
9 ULB ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. BSB BSB: The LORD protects foreigners; He sustains the fatherless and the widow, but the ways of the wicked He frustrates.
10 ULB ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ! BSB BSB: The LORD reigns forever, your God, O Zion, for all generations. Hallelujah!
Select verses for actions: Enter goes to them and Escape comes back.