1 ULB ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. BSB BSB: Hallelujah! Praise the LORD from the heavens; praise Him in the highest places.
2 ULB ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ. BSB BSB: Praise Him, all His angels; praise Him, all His heavenly hosts.
3 ULB ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. BSB BSB: Praise Him, O sun and moon; praise Him, all you shining stars.
4 ULB ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. BSB BSB: Praise Him, O highest heavens, and you waters above the skies.
5 ULB ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು. BSB BSB: Let them praise the name of the LORD, for He gave the command and they were created.
6 ULB ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ. BSB BSB: He established them forever and ever; He issued a decree that will never pass away.
7 ULB ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು BSB BSB: Praise the LORD from the earth, all great sea creatures and ocean depths,
8 ULB ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, BSB BSB: lightning and hail, snow and clouds, powerful wind fulfilling His word,
9 ULB ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು, BSB BSB: mountains and all hills, fruit trees and all cedars,
10 ULB ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, BSB BSB: wild animals and all cattle, crawling creatures and flying birds,
11 ULB ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, BSB BSB: kings of the earth and all peoples, princes and all rulers of the earth,
12 ULB ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು BSB BSB: young men and maidens, old and young together.
13 ULB ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ. BSB BSB: Let them praise the name of the LORD, for His name alone is exalted; His splendor is above the earth and the heavens.
14 ULB ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ! BSB BSB: He has raised up a horn for His people, the praise of all His saints, of Israel, a people near to Him. Hallelujah!
Select verses for actions: Enter goes to them and Escape comes back.