Psalm 16 16 Psalms Book 1 Kannada Unlocked Literal Bible 1 ULB ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. BSB BSB: A Miktam of David. Preserve me, O God, for in You I take refuge.
2 ULB ನಾನು ಯೆಹೋವನನ್ನು ಕುರಿತು, <<ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ>> ಎಂದು ಹೇಳುವೆನು. BSB BSB: I said to the LORD, “You are my Lord; apart from You I have no good thing.”
3 ULB ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, <<ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು>> ಎಂದು ಹೇಳುವೆನು. BSB BSB: As for the saints in the land, they are the excellence in whom all my delight resides.
4 ULB ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. BSB BSB: Sorrows will multiply to those who chase other gods. I will not pour out their libations of blood, or speak their names with my lips.
5 ULB ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. BSB BSB: The LORD is my chosen portion and my cup; You have made my lot secure.
6 ULB ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ. BSB BSB: The lines of my boundary have fallen in pleasant places; surely my inheritance is delightful.
7 ULB ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. BSB BSB: I will bless the LORD who counsels me; even at night my conscience instructs me.
8 ULB ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. BSB BSB: I have set the LORD always before me. Because He is at my right hand, I will not be shaken.
9 ULB ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. BSB BSB: Therefore my heart is glad and my tongue rejoices; my body also will dwell securely.
10 ULB ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. BSB BSB: For You will not abandon my soul to Sheol, nor will You let Your Holy One see decay.
11 ULB ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. BSB BSB: You have made known to me the path of life; You will fill me with joy in Your presence, with eternal pleasures at Your right hand.
Select verses for actions: Enter goes to them and Escape comes back.
Chapter complete
You’ve read Psalm 16
Make Opened yours A free account keeps your place, highlights and notes on every device. Add Plus to ask Study Help about Psalm 16, and keep Opened free for readers who can’t pay.