Psalm 2 2 Psalms Book 1 Kannada Unlocked Literal Bible 1 ULB ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? BSB BSB: Why do the nations rage and the peoples plot in vain?
2 ULB ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, BSB BSB: The kings of the earth take their stand and the rulers gather together, against the LORD and against His Anointed One:
3 ULB <<ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ>> ಎಂದು ಮಾತನಾಡಿಕೊಳ್ಳುತ್ತಾರಲ್ಲಾ. BSB BSB: “Let us break Their chains and cast away Their cords.”
4 ULB ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು. BSB BSB: The One enthroned in heaven laughs; the Lord taunts them.
5 ULB ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, BSB BSB: Then He rebukes them in His anger, and terrifies them in His fury:
6 ULB <<ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು>> ಎಂದು ಹೇಳುವನು. BSB BSB: “I have installed My King on Zion, upon My holy mountain.”
7 ULB ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, <<ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. BSB BSB: I will proclaim the decree spoken to Me by the LORD: “You are My Son; today I have become Your Father.
8 ULB ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. BSB BSB: Ask Me, and I will make the nations Your inheritance, the ends of the earth Your possession.
9 ULB ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ>> ಎಂದು ಹೇಳಿದನು. BSB BSB: You will break them with an iron scepter; You will shatter them like pottery.”
10 ULB ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. BSB BSB: Therefore be wise, O kings; be admonished, O judges of the earth.
11 ULB ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ. BSB BSB: Serve the LORD with fear, and rejoice with trembling.
12 ULB ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು. BSB BSB: Kiss the Son, lest He be angry and you perish in your rebellion, when His wrath ignites in an instant. Blessed are all who take refuge in Him.
Select verses for actions: Enter goes to them and Escape comes back.
Chapter complete
You’ve read Psalm 2
Make Opened yours A free account keeps your place, highlights and notes on every device. Add Plus to ask Study Help about Psalm 2, and keep Opened free for readers who can’t pay.