Psalm 24 24 Psalms Book 1 Kannada Unlocked Literal Bible 1 ULB ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. BSB BSB: A Psalm of David. The earth is the LORD’s, and the fullness thereof, the world and all who dwell therein.
2 ULB ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. BSB BSB: For He has founded it upon the seas and established it upon the waters.
3 ULB ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? BSB BSB: Who may ascend the hill of the LORD? Who may stand in His holy place?
4 ULB ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, BSB BSB: He who has clean hands and a pure heart, who does not lift up his soul to an idol or swear deceitfully.
5 ULB ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. BSB BSB: He will receive blessing from the LORD and vindication from the God of his salvation.
6 ULB ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ BSB BSB: Such is the generation of those who seek Him, who seek Your face, O God of Jacob. Selah
7 ULB ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. BSB BSB: Lift up your heads, O gates! Be lifted up, O ancient doors, that the King of Glory may enter!
8 ULB ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. BSB BSB: Who is this King of Glory? The LORD strong and mighty, the LORD mighty in battle.
9 ULB ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. BSB BSB: Lift up your heads, O gates! Be lifted up, O ancient doors, that the King of Glory may enter!
10 ULB ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ. BSB BSB: Who is He, this King of Glory? The LORD of Hosts—He is the King of Glory. Selah
Select verses for actions: Enter goes to them and Escape comes back.
Chapter complete
You’ve read Psalm 24
Make Opened yours A free account keeps your place, highlights and notes on every device. Add Plus to ask Study Help about Psalm 24, and keep Opened free for readers who can’t pay.