1 ULB ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. BSB BSB: Of David. To You, O LORD, I lift up my soul;
2 ULB ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. BSB BSB: in You, my God, I trust. Do not let me be put to shame; do not let my enemies exult over me.
3 ULB ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. BSB BSB: Surely none who wait for You will be put to shame; but those who engage in treachery without cause will be disgraced.
4 ULB ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. BSB BSB: Show me Your ways, O LORD; teach me Your paths.
5 ULB ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. BSB BSB: Guide me in Your truth and teach me, for You are the God of my salvation; all day long I wait for You.
6 ULB ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. BSB BSB: Remember, O LORD, Your compassion and loving devotion, for they are from age to age.
7 ULB ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. BSB BSB: Remember not the sins of my youth, nor my rebellious acts; remember me according to Your loving devotion, because of Your goodness, O LORD.
8 ULB ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. BSB BSB: Good and upright is the LORD; therefore He shows sinners the way.
9 ULB ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. BSB BSB: He guides the humble in what is right and teaches them His way.
10 ULB ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. BSB BSB: All the LORD’s ways are loving and faithful to those who keep His covenant and His decrees.
11 ULB ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. BSB BSB: For the sake of Your name, O LORD, forgive my iniquity, for it is great.
12 ULB ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. BSB BSB: Who is the man who fears the LORD? He will instruct him in the path chosen for him.
13 ULB ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು. BSB BSB: His soul will dwell in prosperity, and his descendants will inherit the land.
14 ULB ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. BSB BSB: The LORD confides in those who fear Him, and reveals His covenant to them.
15 ULB ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. BSB BSB: My eyes are always on the LORD, for He will free my feet from the mesh.
16 ULB ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. BSB BSB: Turn to me and be gracious, for I am lonely and afflicted.
17 ULB ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. BSB BSB: The troubles of my heart increase; free me from my distress.
18 ULB ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. BSB BSB: Consider my affliction and trouble, and take away all my sins.
19 ULB ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. BSB BSB: Consider my enemies, for they are many, and they hate me with vicious hatred.
20 ULB ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. BSB BSB: Guard my soul and deliver me; let me not be put to shame, for I take refuge in You.
21 ULB ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. BSB BSB: May integrity and uprightness preserve me, because I wait for You.
22 ULB ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. BSB BSB: Redeem Israel, O God, from all its distress.
Select verses for actions: Enter goes to them and Escape comes back.