Psalm 26 26 Psalms Book 1 Kannada Unlocked Literal Bible 1 ULB ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. BSB BSB: Of David. Vindicate me, O LORD! For I have walked with integrity; I have trusted in the LORD without wavering.
2 ULB ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. BSB BSB: Test me, O LORD, and try me; examine my heart and mind.
3 ULB ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. BSB BSB: For Your loving devotion is before my eyes, and I have walked in Your truth.
4 ULB ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. BSB BSB: I do not sit with deceitful men, nor keep company with hypocrites.
5 ULB ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ. BSB BSB: I hate the mob of evildoers, and refuse to sit with the wicked.
6 ULB ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ, BSB BSB: I wash my hands in innocence that I may go about Your altar, O LORD,
7 ULB ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. BSB BSB: to raise my voice in thanksgiving and declare all Your wonderful works.
8 ULB ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. BSB BSB: O LORD, I love the house where You dwell, the place where Your glory resides.
9 ULB ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. BSB BSB: Do not take my soul away with sinners, or my life with men of bloodshed,
10 ULB ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ. BSB BSB: in whose hands are wicked schemes, whose right hands are full of bribes.
11 ULB ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. BSB BSB: But I will walk with integrity; redeem me and be merciful to me.
12 ULB ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. BSB BSB: My feet stand on level ground; in the congregations I will bless the LORD.
Select verses for actions: Enter goes to them and Escape comes back.
Chapter complete
You’ve read Psalm 26
Make Opened yours A free account keeps your place, highlights and notes on every device. Add Plus to ask Study Help about Psalm 26, and keep Opened free for readers who can’t pay.