Psalm 29 29 Psalms Book 1 Kannada Unlocked Literal Bible 1 ULB ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. BSB BSB: A Psalm of David. Ascribe to the LORD, O heavenly beings, ascribe to the LORD glory and strength.
2 ULB ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. BSB BSB: Ascribe to the LORD the glory due His name; worship the LORD in the splendor of His holiness.
3 ULB ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. BSB BSB: The voice of the LORD is over the waters; the God of glory thunders; the LORD is heard over many waters.
4 ULB ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು. BSB BSB: The voice of the LORD is powerful; the voice of the LORD is majestic.
5 ULB ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. BSB BSB: The voice of the LORD breaks the cedars; the LORD shatters the cedars of Lebanon.
6 ULB ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. BSB BSB: He makes Lebanon skip like a calf, and Sirion like a young wild ox.
7 ULB ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. BSB BSB: The voice of the LORD strikes with flames of fire.
8 ULB ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ. BSB BSB: The voice of the LORD shakes the wilderness; the LORD shakes the Wilderness of Kadesh.
9 ULB ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, <<ಎಷ್ಟೋ ಪ್ರಭಾವ!>> ಎನ್ನುತ್ತಾರೆ. BSB BSB: The voice of the LORD twists the oaks and strips the forests bare. And in His temple all cry, “Glory!”
10 ULB ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. BSB BSB: The LORD sits enthroned over the flood; the LORD is enthroned as King forever.
11 ULB ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು. BSB BSB: The LORD gives His people strength; the LORD blesses His people with peace.
Select verses for actions: Enter goes to them and Escape comes back.
Chapter complete
You’ve read Psalm 29
Make Opened yours A free account keeps your place, highlights and notes on every device. Add Plus to ask Study Help about Psalm 29, and keep Opened free for readers who can’t pay.