1 ULB ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. BSB BSB: A Psalm. A song for the dedication of the temple. Of David. I will exalt You, O LORD, for You have lifted me up and have not allowed my foes to rejoice over me.
2 ULB ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. BSB BSB: O LORD my God, I cried to You for help, and You healed me.
3 ULB ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. BSB BSB: O LORD, You pulled me up from Sheol; You spared me from descending into the Pit.
4 ULB ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. BSB BSB: Sing to the LORD, O you His saints, and praise His holy name.
5 ULB ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. BSB BSB: For His anger is fleeting, but His favor lasts a lifetime. Weeping may stay the night, but joy comes in the morning.
6 ULB ನಾನಂತೂ ಸುಖದಿಂದಿದ್ದಾಗ, <<ನಾನು ಎಂದಿಗೂ ಕದಲುವುದಿಲ್ಲ>> ಎಂದು ಹೇಳಿಕೊಂಡಿದ್ದೆನು. BSB BSB: In prosperity I said, “I will never be shaken.”
7 ULB ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. BSB BSB: O LORD, You favored me; You made my mountain stand strong. When You hid Your face, I was dismayed.
8 ULB ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, BSB BSB: To You, O LORD, I called, and I begged my Lord for mercy:
9 ULB <<ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? BSB BSB: “What gain is there in my bloodshed, in my descent to the Pit? Will the dust praise You? Will it proclaim Your faithfulness?
10 ULB ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ>> ಎಂದು ಹೇಳಿದೆನು. BSB BSB: Hear me, O LORD, and have mercy; O LORD, be my helper.”
11 ULB ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. BSB BSB: You turned my mourning into dancing; You peeled off my sackcloth and clothed me with joy,
12 ULB ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. BSB BSB: that my heart may sing Your praises and not be silent. O LORD my God, I will give thanks forever.
Select verses for actions: Enter goes to them and Escape comes back.