1 ULB ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. BSB BSB: Rejoice in the LORD, O righteous ones; it is fitting for the upright to praise Him.
2 ULB ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. BSB BSB: Praise the LORD with the harp; make music to Him with ten strings.
3 ULB ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. BSB BSB: Sing to Him a new song; play skillfully with a shout of joy.
4 ULB ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. BSB BSB: For the word of the LORD is upright, and all His work is trustworthy.
5 ULB ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. BSB BSB: The LORD loves righteousness and justice; the earth is full of His loving devotion.
6 ULB ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. BSB BSB: By the word of the LORD the heavens were made, and all the stars by the breath of His mouth.
7 ULB ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. BSB BSB: He piles up the waters of the sea; He puts the depths into storehouses.
8 ULB ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. BSB BSB: Let all the earth fear the LORD; let all the people of the world revere Him.
9 ULB ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. BSB BSB: For He spoke, and it came to be; He commanded, and it stood firm.
10 ULB ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. BSB BSB: The LORD frustrates the plans of the nations; He thwarts the devices of the peoples.
11 ULB ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. BSB BSB: The counsel of the LORD stands forever, the purposes of His heart to all generations.
12 ULB ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. BSB BSB: Blessed is the nation whose God is the LORD, the people He has chosen as His inheritance!
13 ULB ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; BSB BSB: The LORD looks down from heaven; He sees all the sons of men.
14 ULB ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. BSB BSB: From His dwelling place He gazes on all who inhabit the earth.
15 ULB ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. BSB BSB: He shapes the hearts of each; He considers all their works.
16 ULB ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. BSB BSB: No king is saved by his vast army; no warrior is delivered by his great strength.
17 ULB ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. BSB BSB: A horse is a vain hope for salvation; even its great strength cannot save.
18 ULB ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. BSB BSB: Surely the eyes of the LORD are on those who fear Him, on those whose hope is in His loving devotion
19 ULB ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. BSB BSB: to deliver them from death and keep them alive in famine.
20 ULB ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. BSB BSB: Our soul waits for the LORD; He is our help and our shield.
21 ULB ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. BSB BSB: For our hearts rejoice in Him, since we trust in His holy name.
22 ULB ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ. BSB BSB: May Your loving devotion rest on us, O LORD, as we put our hope in You.
Select verses for actions: Enter goes to them and Escape comes back.