1 ULB ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ. BSB BSB: Of David. Do not fret over those who do evil; do not envy those who do wrong.
2 ULB ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು. BSB BSB: For they wither quickly like grass and wilt like tender plants.
3 ULB ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. BSB BSB: Trust in the LORD and do good; dwell in the land and cultivate faithfulness.
4 ULB ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. BSB BSB: Delight yourself in the LORD, and He will give you the desires of your heart.
5 ULB ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು. BSB BSB: Commit your way to the LORD; trust in Him, and He will do it.
6 ULB ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. BSB BSB: He will bring forth your righteousness like the dawn, your justice like the noonday sun.
7 ULB ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. BSB BSB: Be still before the LORD and wait patiently for Him; do not fret when men prosper in their ways, when they carry out wicked schemes.
8 ULB ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. BSB BSB: Refrain from anger and abandon wrath; do not fret—it can only bring harm.
9 ULB ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು. BSB BSB: For the evildoers will be cut off, but those who hope in the LORD will inherit the land.
10 ULB ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. BSB BSB: Yet a little while, and the wicked will be no more; though you look for them, they will not be found.
11 ULB ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು. BSB BSB: But the meek will inherit the land and delight in abundant prosperity.
12 ULB ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ. BSB BSB: The wicked scheme against the righteous and gnash their teeth at them,
13 ULB ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. BSB BSB: but the Lord laughs, seeing that their day is coming.
14 ULB ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. BSB BSB: The wicked have drawn the sword and bent the bow to bring down the poor and needy, to slay those whose ways are upright.
15 ULB ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; BSB BSB: But their swords will pierce their own hearts, and their bows will be broken.
16 ULB ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. BSB BSB: Better is the little of the righteous than the abundance of many who are wicked.
17 ULB ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು. BSB BSB: For the arms of the wicked will be broken, but the LORD upholds the righteous.
18 ULB ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. BSB BSB: The LORD knows the days of the blameless, and their inheritance will last forever.
19 ULB ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. BSB BSB: In the time of evil they will not be ashamed, and in the days of famine they will be satisfied.
20 ULB ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು. BSB BSB: But the wicked and enemies of the LORD will perish like the glory of the fields. They will vanish; like smoke they will fade away.
21 ULB ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು. BSB BSB: The wicked borrow and do not repay, but the righteous are gracious and giving.
22 ULB ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು. BSB BSB: Surely those He blesses will inherit the land, but the cursed will be destroyed.
23 ULB ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. BSB BSB: The steps of a man are ordered by the LORD who takes delight in his journey.
24 ULB ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು. BSB BSB: Though he falls, he will not be overwhelmed, for the LORD is holding his hand.
25 ULB ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. BSB BSB: I once was young and now am old, yet never have I seen the righteous abandoned or their children begging for bread.
26 ULB ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು. BSB BSB: They are ever generous and quick to lend, and their children are a blessing.
27 ULB ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. BSB BSB: Turn away from evil and do good, so that you will abide forever.
28 ULB ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. BSB BSB: For the LORD loves justice and will not forsake His saints. They are preserved forever, but the offspring of the wicked will be cut off.
29 ULB ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು. BSB BSB: The righteous will inherit the land and dwell in it forever.
30 ULB ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. BSB BSB: The mouth of the righteous man utters wisdom, and his tongue speaks justice.
31 ULB ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ. BSB BSB: The law of his God is in his heart; his steps do not falter.
32 ULB ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. BSB BSB: Though the wicked lie in wait for the righteous, and seek to slay them,
33 ULB ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ. BSB BSB: the LORD will not leave them in their power or let them be condemned under judgment.
34 ULB ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. BSB BSB: Wait for the LORD and keep His way, and He will raise you up to inherit the land. When the wicked are cut off, you will see it.
35 ULB ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು. BSB BSB: I have seen a wicked, ruthless man flourishing like a well-rooted native tree,
36 ULB ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. BSB BSB: yet he passed away and was no more; though I searched, he could not be found.
37 ULB ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು. BSB BSB: Consider the blameless and observe the upright, for posterity awaits the man of peace.
38 ULB ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು. BSB BSB: But the transgressors will all be destroyed; the future of the wicked will be cut off.
39 ULB ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. BSB BSB: The salvation of the righteous is from the LORD; He is their stronghold in time of trouble.
40 ULB ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು. BSB BSB: The LORD helps and delivers them; He rescues and saves them from the wicked, because they take refuge in Him.
Select verses for actions: Enter goes to them and Escape comes back.