1 ULB ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. BSB BSB: A Psalm of David, for remembrance. O LORD, do not rebuke me in Your anger or discipline me in Your wrath.
2 ULB ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. BSB BSB: For Your arrows have pierced me deeply, and Your hand has pressed down on me.
3 ULB ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. BSB BSB: There is no soundness in my body because of Your anger; there is no rest in my bones because of my sin.
4 ULB ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. BSB BSB: For my iniquities have overwhelmed me; they are a burden too heavy to bear.
5 ULB ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. BSB BSB: My wounds are foul and festering because of my sinful folly.
6 ULB ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. BSB BSB: I am bent and brought low; all day long I go about mourning.
7 ULB ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. BSB BSB: For my loins are full of burning pain, and no soundness remains in my body.
8 ULB ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. BSB BSB: I am numb and badly crushed; I groan in anguish of heart.
9 ULB ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. BSB BSB: O Lord, my every desire is before You; my groaning is not hidden from You.
10 ULB ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. BSB BSB: My heart pounds, my strength fails, and even the light of my eyes has faded.
11 ULB ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. BSB BSB: My beloved and friends shun my disease, and my kinsmen stand at a distance.
12 ULB ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. BSB BSB: Those who seek my life lay snares; those who wish me harm speak destruction, plotting deceit all day long.
13 ULB ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. BSB BSB: But like a deaf man, I do not hear; and like a mute man, I do not open my mouth.
14 ULB ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. BSB BSB: I am like a man who cannot hear, whose mouth offers no reply.
15 ULB ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. BSB BSB: I wait for You, O LORD; You will answer, O Lord my God.
16 ULB <<ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು>> ಅಂದುಕೊಂಡೆನು. BSB BSB: For I said, “Let them not gloat over me—those who taunt me when my foot slips.”
17 ULB ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. BSB BSB: For I am ready to fall, and my pain is ever with me.
18 ULB ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. BSB BSB: Yes, I confess my iniquity; I am troubled by my sin.
19 ULB ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. BSB BSB: Many are my enemies without cause, and many hate me without reason.
20 ULB ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. BSB BSB: Those who repay my good with evil attack me for pursuing the good.
21 ULB ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. BSB BSB: Do not forsake me, O LORD; be not far from me, O my God.
22 ULB ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು. BSB BSB: Come quickly to help me, O Lord my Savior.
Select verses for actions: Enter goes to them and Escape comes back.