1 ULB <<ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು>> ಅಂದುಕೊಂಡೆನು. BSB BSB: For the choirmaster. For Jeduthun. A Psalm of David. I said, “I will watch my ways so that I will not sin with my tongue; I will guard my mouth with a muzzle as long as the wicked are present.”
2 ULB ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು. BSB BSB: I was speechless and still; I remained silent, even from speaking good, and my sorrow was stirred.
3 ULB ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು, BSB BSB: My heart grew hot within me; as I mused, the fire burned. Then I spoke with my tongue:
4 ULB <<ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. BSB BSB: “Show me, O LORD, my end and the measure of my days. Let me know how fleeting my life is.
5 ULB ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ>> ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ BSB BSB: You, indeed, have made my days as handbreadths, and my lifetime as nothing before You. Truly each man at his best exists as but a breath. Selah
6 ULB ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. BSB BSB: Surely every man goes about like a phantom; surely he bustles in vain; he heaps up riches not knowing who will haul them away.
7 ULB <<ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ. BSB BSB: And now, O Lord, for what do I wait? My hope is in You.
8 ULB ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ. BSB BSB: Deliver me from all my transgressions; do not make me the reproach of fools.
9 ULB ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು. BSB BSB: I have become mute; I do not open my mouth because of what You have done.
10 ULB ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. BSB BSB: Remove Your scourge from me; I am perishing by the force of Your hand.
11 ULB ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ BSB BSB: You discipline and correct a man for his iniquity, consuming like a moth what he holds dear; surely each man is but a vapor. Selah
12 ULB ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ. BSB BSB: Hear my prayer, O LORD, and give ear to my cry for help; do not be deaf to my weeping. For I am a foreigner dwelling with You, a stranger like all my fathers.
13 ULB ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.>> BSB BSB: Turn Your gaze away from me, that I may again be cheered before I depart and am no more.”
Select verses for actions: Enter goes to them and Escape comes back.