Psalm 4 4 Psalms Book 1 Kannada Unlocked Literal Bible 1 ULB ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. BSB BSB: For the choirmaster. With stringed instruments. A Psalm of David. Answer me when I call, O God of my righteousness! You have relieved my distress; show me grace and hear my prayer.
2 ULB ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ BSB BSB: How long, O men, will my honor be maligned? How long will you love vanity and seek after lies? Selah
3 ULB ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ. BSB BSB: Know that the LORD has set apart the godly for Himself; the LORD hears when I call to Him.
4 ULB ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ BSB BSB: Be angry, yet do not sin; on your bed, search your heart and be still. Selah
5 ULB ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ. BSB BSB: Offer the sacrifices of the righteous and trust in the LORD.
6 ULB <<ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?>> ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. BSB BSB: Many ask, “Who can show us the good?” Shine the light of Your face upon us, O LORD.
7 ULB ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. BSB BSB: You have filled my heart with more joy than when grain and new wine abound.
8 ULB ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. BSB BSB: I will lie down and sleep in peace, for You alone, O LORD, make me dwell in safety.
Select verses for actions: Enter goes to them and Escape comes back.
Chapter complete
You’ve read Psalm 4
Make Opened yours A free account keeps your place, highlights and notes on every device. Add Plus to ask Study Help about Psalm 4, and keep Opened free for readers who can’t pay.