1 ULB ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. BSB BSB: For the choirmaster. A Psalm of David. I waited patiently for the LORD; He inclined to me and heard my cry.
2 ULB ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. BSB BSB: He lifted me up from the pit of despair, out of the miry clay; He set my feet upon a rock, and made my footsteps firm.
3 ULB ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. BSB BSB: He put a new song in my mouth, a hymn of praise to our God. Many will see and fear and put their trust in the LORD.
4 ULB ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. BSB BSB: Blessed is the man who has made the LORD his trust, who has not turned to the proud, nor to those who lapse into falsehood.
5 ULB ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ. BSB BSB: Many, O LORD my God, are the wonders You have done, and the plans You have for us—none can compare to You—if I proclaim and declare them, they are more than I can count.
6 ULB ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. BSB BSB: Sacrifice and offering You did not desire, but my ears You have opened. Burnt offerings and sin offerings You did not require.
7 ULB ಆಗ ನಾನು, <<ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. BSB BSB: Then I said, “Here I am, I have come—it is written about me in the scroll:
8 ULB ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ>> ಅಂದೆನು. BSB BSB: I delight to do Your will, O my God; Your law is within my heart.”
9 ULB ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. BSB BSB: I proclaim righteousness in the great assembly; behold, I do not seal my lips, as You, O LORD, do know.
10 ULB ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. BSB BSB: I have not covered up Your righteousness in my heart; I have declared Your faithfulness and salvation; I have not concealed Your loving devotion and faithfulness from the great assembly.
11 ULB ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. BSB BSB: O LORD, do not withhold Your mercy from me; Your loving devotion and faithfulness will always guard me.
12 ULB ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. BSB BSB: For evils without number surround me; my sins have overtaken me, so that I cannot see. They are more than the hairs of my head, and my heart has failed within me.
13 ULB ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು. BSB BSB: Be pleased, O LORD, to deliver me; hurry, O LORD, to help me.
14 ULB ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. BSB BSB: May those who seek my life be ashamed and confounded; may those who wish me harm be repelled and humiliated.
15 ULB ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. BSB BSB: May those who say to me, “Aha, aha!” be appalled at their own shame.
16 ULB ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, <<ಯೆಹೋವನು ಮಹೋನ್ನತನು>> ಎಂದು ಯಾವಾಗಲೂ ಹೇಳುವವರಾಗಲಿ. BSB BSB: May all who seek You rejoice and be glad in You; may those who love Your salvation always say, “The LORD be magnified!”
17 ULB ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. BSB BSB: But I am poor and needy; may the Lord think of me. You are my helper and deliverer; O my God, do not delay.
Select verses for actions: Enter goes to them and Escape comes back.