1 ULB ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. BSB BSB: For the choirmaster. A Psalm of David. Blessed is the one who cares for the poor; the LORD will deliver him in the day of trouble.
2 ULB ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! BSB BSB: The LORD will protect and preserve him; He will bless him in the land and refuse to give him over to the will of his foes.
3 ULB ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. BSB BSB: The LORD will sustain him on his bed of illness and restore him from his bed of sickness.
4 ULB ನಾನಂತೂ, <<ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು>> ಅಂದೆನು. BSB BSB: I said, “O LORD, be gracious to me; heal me, for I have sinned against You.”
5 ULB ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, <<ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?>> ಎಂದು ಹೇಳಿಕೊಳ್ಳುತ್ತಾರೆ. BSB BSB: My enemies say with malice: “When will he die and be forgotten?”
6 ULB ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. BSB BSB: My visitor speaks falsehood; he gathers slander in his heart; he goes out and spreads it abroad.
7 ULB ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ. BSB BSB: All who hate me whisper against me; they imagine the worst for me:
8 ULB <<ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ. BSB BSB: “A vile disease has been poured into him; he will never get up from where he lies!”
9 ULB ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. BSB BSB: Even my close friend whom I trusted, the one who shared my bread, has lifted up his heel against me.
10 ULB ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. BSB BSB: But You, O LORD, be gracious to me and raise me up, that I may repay them.
11 ULB ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. BSB BSB: By this I know that You delight in me, for my enemy does not triumph over me.
12 ULB ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. BSB BSB: In my integrity You uphold me and set me in Your presence forever.
13 ULB ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್. BSB BSB: Blessed be the LORD, the God of Israel, from everlasting to everlasting. Amen and Amen.
Select verses for actions: Enter goes to them and Escape comes back.