1 ULB ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. BSB BSB: For the choirmaster. A Maskil of the sons of Korah. As the deer pants for streams of water, so my soul longs after You, O God.
2 ULB ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? BSB BSB: My soul thirsts for God, the living God. When shall I come and appear in God’s presence?
3 ULB <<ನಿನ್ನ ದೇವರು ಎಲ್ಲಿ?>> ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. BSB BSB: My tears have been my food both day and night, while men ask me all day long, “Where is your God?”
4 ULB ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. BSB BSB: These things come to mind as I pour out my soul: how I walked with the multitude, leading the festive procession to the house of God with shouts of joy and praise.
5 ULB ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. BSB BSB: Why are you downcast, O my soul? Why the unease within me? Put your hope in God, for I will yet praise Him for the salvation of His presence.
6 ULB ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ. BSB BSB: O my God, my soul despairs within me. Therefore I remember You from the land of Jordan and the peaks of Hermon—even from Mount Mizar.
7 ULB ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ. BSB BSB: Deep calls to deep in the roar of Your waterfalls; all Your breakers and waves have rolled over me.
8 ULB ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು. BSB BSB: The LORD decrees His loving devotion by day, and at night His song is with me as a prayer to the God of my life.
9 ULB ನಾನು ನನ್ನ ಶರಣನಿಗೆ, <<ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?>> ಎಂದು ಮೊರೆಯಿಡುವೆನು. BSB BSB: I say to God my Rock, “Why have You forgotten me? Why must I walk in sorrow because of the enemy’s oppression?”
10 ULB ನನ್ನ ವಿರೋಧಿಗಳು, <<ನಿನ್ನ ದೇವರು ಎಲ್ಲಿ?>> ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ. BSB BSB: Like the crushing of my bones, my enemies taunt me, while they say to me all day long, “Where is your God?”
11 ULB ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. BSB BSB: Why are you downcast, O my soul? Why the unease within me? Put your hope in God, for I will yet praise Him, my Savior and my God.
Select verses for actions: Enter goes to them and Escape comes back.